ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (Leelavati) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳೆ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬದ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಬರೆದುಕೊಂಡಿದ್ದಾರೆ.
Advertisement
ತೋಟದಲ್ಲಿ ಅಂತಿಮ ಸಂಸ್ಕಾರ
Advertisement
ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Advertisement
Advertisement
ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ‘ಇಂದು ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.
ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.