– ಭಾರತದ 140 ಕೋಟಿ ದೇಶವಾಸಿಗಳಿಂದ ಬಂದ ಗೌರವ ಎಂದ ಮೋದಿ
ಕೊಲೊಂಬೊ: ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ (Anura Kumara Dissanayake) ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Modi) ‘ಮಿತ್ರ ವಿಭೂಷಣ’ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಥೈಲ್ಯಾಂಡ್ ಬಳಿಕ ಈಗ ಪ್ರಧಾನಿ ಮೋದಿ ಅವರು ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ದೇಶದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಇದನ್ನೂ ಓದಿ: ಬ್ಯಾಂಕಾಕ್‌ನ ಬುದ್ಧ ಟೆಂಪಲ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ
ಬಳಿಕ ಮೋದಿಗೆ ‘ಮಿತ್ರ ವಿಭೂಷಣ’ (Mitra Vibhushana) ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಲಂಕಾ ಸರ್ಕಾರವು ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧ ಹೊಂದಿರುವ ದೇಶಗಳ ಮುಖ್ಯಸ್ಥರಿಗೆ ಈ ಗೌರವವನ್ನು ನೀಡುತ್ತದೆ.
ಭಾರತವು ಐತಿಹಾಸಿಕವಾಗಿ ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ. ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ, ಸಹಾಯಹಸ್ತ ಚಾಚಿದ ಮೊದಲ ದೇಶ ಭಾರತವಾಗಿತ್ತು. ಈಗ ಈ ಉತ್ತಮ ಸಂಬಂಧಗಳನ್ನು ಗುರುತಿಸಿ, ಶ್ರೀಲಂಕಾ ಸರ್ಕಾರ ಪ್ರಧಾನಿ ಮೋದಿಯವರಿಗೆ ಈ ಗೌರವವನ್ನು ನೀಡಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾರತದ 140 ಕೋಟಿ ದೇಶವಾಸಿಗಳಿಂದ ಬಂದ ಗೌರವ ಎಂದು ಮೋದಿ ಬಣ್ಣಿಸಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ – ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಭಾಗಿ