ಗಾಂಧಿನಗರ: ಭಾರತ-ಪಾಕ್ ನಡುವಿನ ಉದ್ವಿಗ್ನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ(Narendra Modi) ಗುಜರಾತ್ ಸಿಎಂ ಭೂಪೇಂದ್ರ ಪಟೇಲ್(Bhupendra Patel) ಜೊತೆ ಗಡಿ ಜಿಲ್ಲೆಗಳ ಭದ್ರತೆ ಕುರಿತು ಚರ್ಚೆ ನಡೆಸಿದರು.
ಪ್ರಧಾನಿ ಮೋದಿ ಅವರು ಗುಜರಾತ್(Gujarat) ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಕರೆ ಮಾಡಿ, ಗಡಿ ರಾಜ್ಯವಾದ ಗುಜರಾತ್‌ನಲ್ಲಿ ಪ್ರಸ್ತುತ ಉದ್ವಿಗ್ನತೆಯ ಪರಿಸ್ಥಿತಿಗೆ ರಾಜ್ಯ ಸರ್ಕಾರ ಕೈಗೊಂಡಿರುವ ಮುಂಗಡ ಯೋಜನೆಯ ವಿವರಗಳನ್ನು ಪಡೆದರು. ಈ ವೇಳೆ ಪ್ರಧಾನಿ ಅವರು ಕೆಲವು ಅಗತ್ಯ ಮಾರ್ಗದರ್ಶನವನ್ನೂ ನೀಡಿದರು. ಇದನ್ನೂ ಓದಿ: India’s Strike | ಪಾಕ್ ಮೇಲೆ ಭಾರತ ಪ್ರಯೋಗಿಸಿದ 3 ರಾಷ್ಟ್ರಗಳ ಶಸ್ತ್ರಾಸ್ತ್ರಗಳು ಎಷ್ಟು ಪವರ್‌ಫುಲ್?
ಪಾಕಿಸ್ತಾನ ಗಡಿಗೆ(Pakistan Border) ಸಂಪರ್ಕ ಹೊಂದಿರುವ ಕಚ್, ಬನಸ್ಕಂತ, ಪಟಾನ್, ಜಾಮ್‌ನಗರದಂತಹ ಸೂಕ್ಷ್ಮ ಜಿಲ್ಲೆಗಳಲ್ಲಿ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಪಡೆದರು. ಇದನ್ನೂ ಓದಿ: ಸೇನಾ ಮುಖ್ಯಸ್ಥರ ಜೊತೆ ಹೈವೋಲ್ಟೇಜ್ ಸಭೆ ನಡೆಸಿದ ರಾಜನಾಥ್ ಸಿಂಗ್
ಪ್ರಧಾನಿ ಮೋದಿಯವರು ಗಡಿ ಸುರಕ್ಷತೆ ಬಗ್ಗೆ ಮಾಹಿತಿ ಪಡೆದಿರುವುದರ ಕುರಿತು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಪಾಕಿಸ್ತಾನವು ಗುಜರಾತ್‌ನ ಭುಜ್ ಸೇರಿದಂತೆ 15 ನಗರಗಳಲ್ಲಿ ಮಿಲಿಟರಿ ಸ್ಥಾಪನೆಗಳ ಮೇಲೆ ನಡೆಸಿದ ವಾಯುದಾಳಿ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ.