ನವದೆಹಲಿ: ಪ್ರಧಾನಿಯಾಗಿ ಒಂಬತ್ತು ವರ್ಷಗಳ ಅಧಿಕಾರಾವಧಿಯಲ್ಲಿ ನರೇಂದ್ರ ಮೋದಿಯವರು ಇಲ್ಲಿಯವರೆಗೆ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಪ್ರಕಟಿಸಿದೆ.
ಪುಣೆ ಮೂಲದ ಉದ್ಯಮಿ ಪ್ರಫುಲ್ ಪಿ ಸರ್ದಾ ಸಲ್ಲಿಸಿರುವ ಮಾಹಿತಿ ಹಕ್ಕು (RTI) ಪ್ರಶ್ನೆಗೆ ಪಿಎಂಒ ಉತ್ತರಿಸಿದೆ. 2014 ರಲ್ಲಿ ಭಾರತದ ಪ್ರಧಾನಿಯಾದ ನಂತರ ಪಿಎಂ ಮೋದಿ ಎಷ್ಟು ದಿನ ಕಚೇರಿಗೆ ಹಾಜರಾಗಿದ್ದರು? ಅಲ್ಲದೇ ಅವರು ಎಷ್ಟು ದಿನಗಳು ರಜೆ ಪಡೆದಿದ್ದಾರೆ? ಎಂದು ಅರ್ಜಿಯಲ್ಲಿ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿರುವ ಪಿಎಂಒ, ಪ್ರಧಾನಿ ಮೋದಿಯವರು ಯಾವಾಗಲೂ ಕರ್ತವ್ಯದಲ್ಲಿರುತ್ತಾರೆ. ಅವರು ಅಧಿಕಾರ ವಹಿಸಿಕೊಂಡ ನಂತರ ಯಾವುದೇ ರಜೆಯನ್ನೂ ಪಡೆದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ – ಬೈಡನ್ ಪ್ರವಾಸಕ್ಕೂ ಮುನ್ನ ಜಿಲ್ ಬೈಡನ್‍ಗೆ ಕೊರೊನಾ ಸೋಂಕು
Advertisement
ಎರಡನೇ ಪ್ರಶ್ನೆಯಾಗಿ ಎಷ್ಟು ದಿನಗಳ ಹಾಜರಾತಿ, ವಿವಿಧ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ ಎಂಬ ವಿವರಗಳನ್ನು ಕೇಳಲಾಗಿತ್ತು. ಇದಕ್ಕೆ ಪಿಎಂಒ ವೆಬ್‍ಸೈಟ್ ಲಿಂಕ್‍ನ್ನು ಒದಗಿಸಲಾಗಿದೆ. ಮೇ 2014 ರಲ್ಲಿ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೇಶ ಹಾಗೂ ವಿದೇಶಗಳಲ್ಲಿನ 3,000 ಕ್ಕೂ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
Advertisement
Advertisement
ಈ ಉತ್ತರಗಳು ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ಹಲವಾರು ಜನ ಶ್ರೇಷ್ಠ ಮತ್ತು ಆದರ್ಶ ಪ್ರಧಾನಿ, ರಾಷ್ಟ್ರದ ಅಭಿವೃದ್ಧಿ ಕಡೆಗೆ ಅವರ ಸಹಕಾರ, ಸಮರ್ಪಣಾ ಮತ್ತು ಜವಾಬ್ದಾರಿಗಾಗಿ ಯಾವಾಗಲೂ ಗೌರವಿಸುತ್ತೇವೆ ಮತ್ತು ಪ್ರಶಂಸಿಸುತ್ತೇವೆ. ನಿಮ್ಮ ಕೊಡುಗೆಗಾಗಿ ಧನ್ಯವಾದಗಳು ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ಬರೆದು ಕೊಂಡಿದ್ದಾರೆ. ಇನ್ನೊಬ್ಬ ಟ್ವಿಟ್ಟರ್ ಬಳಕೆದಾರರು ರಾಷ್ಟ್ರದ ಸೇವೆಗಾಗಿ ದಣಿವರಿಯದೆ ತನ್ನನ್ನು ಸಮರ್ಪಿಸಿಕೊಳ್ಳುವ ನಾಯಕ, ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ.
Advertisement
ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಹ ಇದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ನನ್ನ ಪ್ರಧಾನಿ ನನ್ನ ಹೆಮ್ಮೆ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬ್ಯಾಂಕಾಕ್‍ನಲ್ಲಿ ಭಾರತೀಯ ಸಮುದಾಯದೊಂದಿಗಿನ ಸಂವಾದದಲ್ಲಿ ಪ್ರಧಾನಿ ಮೋದಿ ಹೇಗೆ ಕೆಲಸ ಮಾಡುತ್ತಾರೆ ಎಂಬುದರ ಬಗ್ಗೆ ಮಾತಾಡಿದ್ದರು. ಈ ವೇಳೆ ಪ್ರಧಾನಿ ಮೋದಿಯಂತಹ ವ್ಯಕ್ತಿಯನ್ನು ಹೊಂದಲು ಇದು ದೇಶದ ಅಗಾಧ ಅದೃಷ್ಟ ಎಂದು ನಾನು ಭಾವಿಸುತ್ತೇನೆ ಎಂದಿದ್ದರು.
2016 ರಲ್ಲಿ ಇದೇ ರೀತಿಯ ಆರ್‌ಟಿಐ ಪ್ರಶ್ನೆಯನ್ನು ಸಲ್ಲಿಸಲಾಗಿತ್ತು. ಆ ಸಮಯದಲ್ಲಿ ಆರ್‌ಟಿಐ ಅರ್ಜಿದಾರರೊಬ್ಬರು ದೇಶದ ಪ್ರಧಾನಿಗೆ ರಜೆ ನಿಯಮಗಳು ಮತ್ತು ಕಾರ್ಯವಿಧಾನಗಳ ಪ್ರತಿಯನ್ನು ಕೇಳಿದ್ದರು. ಪ್ರಧಾನಿ ಅವರು ಸಾರ್ವಕಾಲಿಕ ಕರ್ತವ್ಯದಲ್ಲಿದ್ದಾರೆ ಎಂದು ಪಿಎಂಒ ತಿಳಿಸಿತ್ತು. ಇದನ್ನೂ ಓದಿ: ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ
Web Stories