ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಶನಿವಾರ 65 ಲಕ್ಷ ಸ್ವಾಮಿತ್ವ ಆಸ್ತಿ ಕಾರ್ಡ್‌ಗಳನ್ನು (Svamitva property cards) ವಿತರಿಸಿದ್ದಾರೆ. ಇದು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ ಮತ್ತು ಬಡತನ ನಿರ್ಮೂಲನೆಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೆಲವು ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಿದರು. ಈ ಯೋಜನೆಯು ಜನರಿಗೆ ಸಾಲ ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಖಾಸಗೀಕರಣ ಹೊಸ್ತಿಲಲ್ಲಿದ್ದ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರದಿಂದ ಜೀವದಾನ – 11,440 ಕೋಟಿ ಪುನಶ್ಚೇತನ ಪ್ಯಾಕೇಜ್
ಛತ್ತೀಸ್‌ಗಢ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ಎರಡು ಕೇಂದ್ರಾಡಳಿತ ಪ್ರದೇಶಗಳ 10 ರಾಜ್ಯಗಳ 50,000 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಫಲಾನುಭವಿಗಳಿಗೆ ಈ ಆಸ್ತಿ ಕಾರ್ಡ್‌ಗಳನ್ನು ವಿತರಿಸಲಾಗಿದೆ.
ಇಂದು 65 ಲಕ್ಷ ಕಾರ್ಡ್‌ಗಳನ್ನು ವಿತರಿಸಲಾಗಿದೆ. ನಂತರ ಹಳ್ಳಿಗಳಲ್ಲಿ ಸುಮಾರು 2.24 ಕೋಟಿ ಫಲಾನುಭವಿಗಳು ಈಗ ಸ್ವಾಮಿತ್ವ ಆಸ್ತಿ ಕಾರ್ಡ್‌ಗಳನ್ನು ಪಡೆಯುತ್ತಾರೆ ಎಂದು ಪ್ರಧಾನಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್ – ಸಂಜಯ್ ರಾಯ್ ದೋಷಿ
ಆಸ್ತಿ ಹಕ್ಕುಗಳು ಪ್ರಪಂಚದಾದ್ಯಂತ ಒಂದು ಪ್ರಮುಖ ಸವಾಲಾಗಿದೆ. ವರ್ಷಗಳ ಹಿಂದೆ, ವಿಶ್ವಸಂಸ್ಥೆಯು ಒಂದು ಅಧ್ಯಯನವನ್ನು ನಡೆಸಿತ್ತು. ಇದು ಹಲವಾರು ದೇಶಗಳಲ್ಲಿ ಜನರು ಆಸ್ತಿ ಹಕ್ಕುಗಳಿಗೆ ಕಾನೂನು ದಾಖಲೆಗಳನ್ನು ಹೊಂದಿಲ್ಲ ಎಂದು ಬಹಿರಂಗಪಡಿಸಿತ್ತು. ಬಡತನ ನಿರ್ಮೂಲನೆಗೆ ಆಸ್ತಿ ಹಕ್ಕುಗಳು ಮುಖ್ಯ ಎಂದು ವಿಶ್ವಸಂಸ್ಥೆ ಹೇಳಿದೆ ಎಂದಿದ್ದಾರೆ.