ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ಆರೋಗ್ಯ ಹದಗೆಟ್ಟಿದ್ದು, ಭಾನುವಾರ ಅವರನ್ನು ಗುರುಗ್ರಾಮ್‍ನ (Gurugram) ಮೇದಾಂತ ಆಸ್ಪತ್ರೆಯಲ್ಲಿ ಐಸಿಯುಗೆ (ICU of the Medanta Hospital) ದಾಖಲಿಸಲಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi) ಅವರು ಅಖಿಲೇಶ್ ಯಾದವ್ (Akhilesh Yadav) ಅವರನ್ನು ಸಂಪರ್ಕಿಸಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ವಿಚಾರಿಸಿದ್ದಾರೆ.
आज पूर्व मुख्यमंत्री श्री अखिलेश यादव जी से दूरभाष पर वार्ता कर उनके पिता एवं पूर्व मुख्यमंत्री श्री मुलायम सिंह यादव जी का कुशल-क्षेम पूछा।
प्रभु श्री राम से प्रार्थना है कि उनको शीघ्र स्वास्थ्य लाभ प्रदान करें।
— Yogi Adityanath (@myogiadityanath) October 2, 2022
Advertisement
ಮೊದಲಿಗೆ ಜನರಲ್ ವಾರ್ಡ್‍ಗೆ ದಾಖಲಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರಿಗೆ ಉಸಿರಾಟ ತೊಂದರೆಯುಂಟಾಗಿದ್ದರಿಂದ ಇದೀಗ ಅವರನ್ನು ಐಸಿಯು ವಾರ್ಡ್‍ಗೆ ರವಾನಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್‍ರನ್ನು ಹಲವು ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುಗೆ ಸ್ಥಳಾಂತರಿಸಲಾಗಿದೆ. ಸದ್ಯ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಸತತ ಮಳೆಗೆ ಮನೆಗೋಡೆ ಕುಸಿತ – ಒಂದೇ ಕುಟುಂಬದ ಮೂವರು ಸಾವು
Advertisement
Advertisement
ಮತ್ತೊಂದೆಡೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಅಖಿಲೇಶ್ ಯಾದವ್ ಅವರೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಲ್ಲು ತುಂಬಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ – ಬಸ್‌ನಲ್ಲಿದ್ದ ದಂಪತಿ ದುರ್ಮರಣ, 20 ಮಂದಿಗೆ ಗಾಯ