ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ (PM Modi) ಕನ್ನಡ ರಾಜ್ಯೋತ್ಸವದ (Kannada Rajyotsav) ಶುಭಾಶಯ ತಿಳಿಸಿದ್ದಾರೆ.
ಕನ್ನಡದಲ್ಲೇ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮಧ್ಯರಾತ್ರಿ ಜಿಟಿಜಿಟಿ ಮಳೆಯಲ್ಲೇ ಆಚರಣೆ
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ…
— Narendra Modi (@narendramodi) November 1, 2025
ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
Warm greetings to the people of Andhra Pradesh, Chhattisgarh, Haryana, Karnataka, Kerala, Lakshadweep, Madhya Pradesh, Punjab, and Puducherry on their Formation Day! Each of these regions has made remarkable contributions to India’s progress. May these states and Union…
— President of India (@rashtrapatibhvn) November 1, 2025
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್‌ಗಢ, ಹರಿಯಾಣ, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪಂಜಾಬ್ ಮತ್ತು ಪುದುಚೇರಿ ರಾಜ್ಯಗಳ ಜನತೆಗೆ ಅವರ ರಚನೆಯ ದಿನದಂದು ಹಾರ್ದಿಕ ಶುಭಾಶಯಗಳು! ಈ ಪ್ರತಿಯೊಂದು ಪ್ರದೇಶಗಳು ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿವೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿವೃದ್ಧಿಯ ಪ್ರಯಾಣದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವುದನ್ನು ಮುಂದುವರಿಸಲಿ. ಅವರ ಎಲ್ಲಾ ನಿವಾಸಿಗಳ ನಿರಂತರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ನಾನು ನನ್ನ ಶುಭಾಶಯಗಳನ್ನು ಕೋರುತ್ತೇನೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.
ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ.
Warm… pic.twitter.com/rScHjd3ljC
— Amit Shah (@AmitShah) November 1, 2025
ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಕನ್ನಡದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಭಕೋರಿದ್ದಾರೆ.
ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಕರ್ನಾಟಕವು ರಾಷ್ಟ್ರಕ್ಕೆ ಶ್ರೇಷ್ಠ ಸಮಾಜ ಸುಧಾರಕರು, ಲೇಖಕರು, ಸಂಗೀತಗಾರರು, ದಾರ್ಶನಿಕ ರಾಜರು, ಉದ್ಯಮಿಗಳು ಮತ್ತು ನವೋದ್ಯಮಗಳನ್ನು ನೀಡಿದೆ. ಸಂಸ್ಕೃತಿ ಮತ್ತು ನಾವೀನ್ಯತೆ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದಕ್ಕೆ ಇದು ಒಂದು ಉಜ್ವಲ ಉದಾಹರಣೆಯಾಗಿದೆ.…
— Nirmala Sitharaman (@nsitharaman) November 1, 2025
ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಕರ್ನಾಟಕವು ರಾಷ್ಟ್ರಕ್ಕೆ ಶ್ರೇಷ್ಠ ಸಮಾಜ ಸುಧಾರಕರು, ಲೇಖಕರು, ಸಂಗೀತಗಾರರು, ದಾರ್ಶನಿಕ ರಾಜರು, ಉದ್ಯಮಿಗಳು ಮತ್ತು ನವೋದ್ಯಮಗಳನ್ನು ನೀಡಿದೆ. ಸಂಸ್ಕೃತಿ ಮತ್ತು ನಾವೀನ್ಯತೆ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದಕ್ಕೆ ಇದು ಒಂದು ಉಜ್ವಲ ಉದಾಹರಣೆಯಾಗಿದೆ. ರಾಜ್ಯವು ಪ್ರಗತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಎತ್ತರಗಳನ್ನು ಏರಲಿ ಎಂದು ಹಾರೈಸುತ್ತೇನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಭಾಶಯ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಕನ್ನಡಾಂಬೆ ಸ್ಮರಿಸಿ ಕನ್ನಡಿಗರು ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದಾರೆ.
