ನವದೆಹಲಿ: ಬೆಂಗಳೂರು-ಹೈದರಾಬಾದ್ ಸೇರಿದಂತೆ 9 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಭಾನುವಾರ) ಚಾಲನೆ ನೀಡಿದರು.
ಕರ್ನಾಟಕ ಸೇರಿದಂತೆ 11 ರಾಜ್ಯಗಳನ್ನು ಸಂಪರ್ಕಿಸುವ, 9 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ (Vande Bharat Express Trains) ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಚಾಲನೆ ಕೊಟ್ಟರು. ಇದನ್ನೂ ಓದಿ: ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್
Advertisement
Advertisement
ಈ ವೇಳೆ ಮಾತನಾಡಿದ ಪ್ರಧಾನಿ, ವಂದೇ ಭಾರತ್ ರೈಲುಗಳು ಭಾರತದಾದ್ಯಂತ ಪ್ರವಾಸೋದ್ಯಮ ಉತ್ತೇಜಿಸುತ್ತವೆ. ಪ್ರಯಾಣದ ಸಮಯವನ್ನು ಕಡಿಮೆಗೊಳಿಸುತ್ತವೆ. ಸರ್ಕಾರವು ಬಹು-ಮಾದರಿ ಸಂಪರ್ಕ ಮತ್ತು ಸುಲಭ ಪ್ರಯಾಣದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ತಿಳಿಸಿದ್ದಾರೆ.
Advertisement
ಒಂಬತ್ತು ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳಲ್ಲಿ ಸಂಪರ್ಕ ಸಾಧಿಸಲಿವೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್
Advertisement
ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ತಿರುನಲ್ವೇಲಿ-ಮದುರೈ- ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್, ಹೈದರಾಬಾದ್-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ವಿಜಯವಾಡ-ಚೆನ್ನೈ (ರೇಣಿಗುಂಟಾ ಮೂಲಕ) ವಂದೇ ಭಾರತ್ ಎಕ್ಸ್‌ಪ್ರೆಸ್, ಪಾಟ್ನಾ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್, ಕಾಸರಗೋಡು-ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್, ರೂರ್ಕೆಲಾ-ಭುವನೇಶ್ವರ್-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್, ರಾಂಚಿ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜಾಮ್‌ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಮೋದಿ ಚಾಲನೆ ನೀಡಿದರು.
Web Stories