Bengaluru CityDistrictsKarnatakaLatestLeading NewsMain Post

ಮೋದಿಯಿಂದ ವಂದೇ ಭಾರತ್‌, ಕಾಶಿ ದರ್ಶನ್ ರೈಲಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್‌(Vande Bharat) ರೈಲಿಗೆ ಚಾಲನೆ ನೀಡಿದ್ದಾರೆ.

ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ(Bharat Gaurav Kashi Yatra) ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಬೆಂಗ್ಳೂರಿಗೆ ಮೋದಿ ಆಗಮನ – BMTC, KSRTC ಬಸ್ ಸಂಚಾರ 2 ಗಂಟೆ ಸ್ಥಗಿತ

ಈ ಕಾರ್ಯಕ್ರಮಕ್ಕೆ ಮೊದಲು ಬೆಳಗ್ಗೆ ವಿಧಾನಸೌಧಕ್ಕೆ ಆವರಣಕ್ಕೆ ಆಗಮಿಸಿ ಶಾಸಕರ ಭವನದ ಮುಂದೆ ಇರುವ ಕನಕದಾಸ ಮತ್ತು ವಾಲ್ಮಿಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದ್ದಾರೆ. ಇಂದು ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಮೋದಿ ಪುಷ್ಪಾರ್ಚನೆ ಮಾಡಿರುವುದು ವಿಶೇಷ.

ಇಂದು ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಸ್ವಾಗತಿಸಿದರು.

Live Tv

Leave a Reply

Your email address will not be published. Required fields are marked *

Back to top button