ನವದೆಹಲಿ: ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮೊದಲ ಸ್ಥಾನ ಪಡೆದಿದ್ದಾರೆ. ಅಮೇರಿಕ ಮೂಲದ ‘ಮಾರ್ನಿಂಗ್ ಕನ್ಸಲ್ಟ್’ ಜಾಗತಿಕ ನಾಯಕರ ಸಮೀಕ್ಷೆ ನಡೆಸಿದ್ದು, 78% ರಷ್ಟು ಮತಗಳನ್ನು ಪಡೆಯುವ ಮೂಲಕ ಮೋದಿ ಮೊದಲ ಸ್ಥಾನಕ್ಕೇರಿದ್ದಾರೆ.
22 ದೇಶಗಳ ಪ್ರಧಾನಿ ಮತ್ತು ಅಧ್ಯಕ್ಷರ ಹೆಸರುಗಳನ್ನು ಸಮೀಕ್ಷೆಗೆ ನೀಡಲಾಗಿತ್ತು. ಈ ಪೈಕಿ ಪ್ರಧಾನಿ ನರೇಂದ್ರ ಮೋದಿ 78% ಮತಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದರೆ, 68% ಮತಗಳನ್ನು ಪಡೆದ ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಎರಡನೇ, 62% ಮತಗಳನ್ನು ಪಡೆದ ಸ್ವಿಸ್ ಅಧ್ಯಕ್ಷ ಅಲೈನ್ ಬರ್ಸೆಟ್ ಮೂರನೇ ಸ್ಥಾನದಲ್ಲಿದ್ದಾರೆ.
Advertisement
Advertisement
22 ನಾಯಕರ ಪೈಕಿ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ 58% ಅನುಮೋದನೆಯೊಂದಿಗೆ 4 ನೇ ಸ್ಥಾನದಲ್ಲಿದ್ದು, ಬ್ರೆಜಿಲ್‍ನ ಹೊಸದಾಗಿ ಚುನಾಯಿತ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು 50 ಪ್ರತಿಶತ ರೇಟಿಂಗ್‍ಗಳೊಂದಿಗೆ 5 ನೇ ಸ್ಥಾನದಲ್ಲಿದ್ದಾರೆ. ಹೊಸದಾಗಿ ಆಯ್ಕೆಯಾದ ಬಲಪಂಥೀಯ ನಾಯಕಿ ಇಟಲಿಯ ಜಾರ್ಜಿಯಾ ಮೆಲೋನಿ ದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿಯಾಗಿ 52% ರಷ್ಟು ರೇಟಿಂಗ್‍ಗಳೊಂದಿಗೆ 6 ನೇ ಸ್ಥಾನದಲ್ಲಿದ್ದಾರೆ.
Advertisement
ಅಮೇರಿಕ ಅಧ್ಯಕ್ಷ ಜೋ ಬೈಡನ್ 40% ಮತಗಳೊಂದಿಗೆ ಏಳನೇ ಸ್ಥಾನದಲ್ಲಿದ್ದು, ನಾರ್ವೇಜಿಯನ್ ಪ್ರಧಾನಿ ಜೊನಾಸ್ ಗಹರ್ ಸ್ಟೋರ್, ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸಿಯೋಕ್-ಯೌಲ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಪಟ್ಟಿಯಲ್ಲಿ ಕೊನೆಯ ಮೂರರಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಲೆ- 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ: ನಳಿನ್ ಕುಮಾರ್ ಕಟೀಲ್
Advertisement
US-ಟ್ರ್ಯಾಕಿಂಗ್ ಸಂಸ್ಥೆಯ ವೆಬ್‍ಸೈಟ್‍ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, 78% ರಷ್ಟು ಜನರು ಪ್ರಧಾನಿ ಮೋದಿಯನ್ನು ಅನುಮೋದಿಸಿದ್ದಾರೆ ಮತ್ತು 18% ರಷ್ಟು ಜನರು ಅವರನ್ನು ನಿರಾಕರಿಸಿದ್ದಾರೆ. ಪ್ರಧಾನಿ ಮೋದಿ ಅವರ ಅನುಮೋದನೆ ರೇಟಿಂಗ್ ಇತ್ತೀಚೆಗೆ ಹೆಚ್ಚಾಗಿದ್ದು, ಇದು ಜನವರಿ ಮೂರನೇ ವಾರದಲ್ಲಿ 79% ರಷ್ಟಿದೆ.
‘ಗ್ಲೋಬಲ್ ಲೀಡರ್ ಅಪ್ರೂವಲ್’ ಹೆಸರಿನಲ್ಲಿ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯೂ ಜನವರಿ 26-31 ವರೆಗೂ ಸಮೀಕ್ಷೆ ನಡೆಸಿತ್ತು. ಆಯಾ ದೇಶಗಳ ಜನಸಂಖ್ಯೆ ಆಧಾರದ ಮೇಲೆ ವಯಸ್ಕ ಜನರಿಂದ ಅಭಿಪ್ರಾಯ ಪಡೆದು ತನ್ನ ವರದಿಯನ್ನು ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ. ರಷ್ಯಾ- ಉಕ್ರೇನ್ (Russia- Ukraine) ಯುದ್ಧದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ತಟಸ್ಥ ನಿಲುವು ಮತ್ತು ಸೆಪ್ಟೆಂಬರ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ವಿಶ್ವಕ್ಕೆ ಶಾಂತಿ ಮಂತ್ರ ಪಠಿಸಿದ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಜನರು ಸ್ವಾಗತಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k