ನವದೆಹಲಿ: ಕೊಳೆಗೇರಿ ಪುನರ್ವಸತಿ (Slum Rehabilitation) ಯೋಜನೆಯ ಭಾಗವಾಗಿ ದೆಹಲಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಬಡವರಿಗೆ ಹೊಸದಾಗಿ ನಿರ್ಮಿಸಲಾದ 3,024 ಮನೆಗಳನ್ನ ಫ್ಲಾಟ್‌ಗಳನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಹಸ್ತಾಂತರಿಸಿದ್ದಾರೆ.
ಇಂದು ದೆಹಲಿಯಲ್ಲಿ (NewDelhi) ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಫಲಾನುಭವಿಗಳಿಗೆ ಮನೆ ಕೀಲಿಗಳನ್ನ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: 132 ಕೃತ್ಯಗಳಲ್ಲಿ ಭಾಗಿಯಾಗಿದ್ದ ಬೆಳಗಾವಿಯ 12 ಆರೋಪಿಗಳು ಗಡಿಪಾರು
Advertisement
Advertisement
ಈ ಬೆಳವಣಿಗೆಯು ಕೊಳೆಗೇರಿ ನಿವಾಸಿಗಳಿಗೆ (Slum People) ಮಾಲೀಕತ್ವ ಹಾಗೂ ಭದ್ರತೆಯ ಭಾವನೆ ತರುತ್ತದೆ ಎಂದು ಈ ಹಿಂದೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಹೇಳಿತ್ತು. ಇದನ್ನೂ ಓದಿ: 132 ಕೃತ್ಯಗಳಲ್ಲಿ ಭಾಗಿಯಾಗಿದ್ದ ಬೆಳಗಾವಿಯ 12 ಆರೋಪಿಗಳು ಗಡಿಪಾರು
Advertisement
ದೆಹಲಿ ಅಭಿವೃದ್ಧಿ ಪ್ರಾಧಿಕಾರವು (DDA) ಸಹ ಪ್ರತಿಯೊಬ್ಬರಿಗೂ ಕೊಳೆಗೇರಿ ಪುನರ್ವಸತಿ ಯೋಜನೆ ಅಡಿಯಲ್ಲಿ 376 ಜುಗ್ಗಿ-ಜೋಪ್ರಿ (Slum) ಕ್ಲಸ್ಟರ್‌ಗಳಲ್ಲಿ ವಸತಿ ಕಲ್ಪಿಸುವ ಉದ್ದೇಶ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.
Advertisement
ಕಾರ್ಯಕ್ರಮದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಭಾಗವಹಿಸಿದ್ದರು.