ನವದೆಹಲಿ: ಕರ್ನಾಟಕದ ವಿದ್ಯಾರ್ಥಿಯೊಬ್ಬ ನಿನ್ನೆ ಬೆಳಗ್ಗೆ ಉಕ್ರೇನ್‍ನ ಖಾರ್ಕಿವ್‍ನಲ್ಲಿ ರಷ್ಯಾದ ಶೆಲ್ ದಾಳಿಗೆ ಸಾವನ್ನಪ್ಪಿದ ಬೆನ್ನಲ್ಲೇ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನಗಳನ್ನು ಪರೀಶಿಲಿಸಲು ಪ್ರಧಾನಿ ಮೋದಿ ಮಂಗಳವಾರ 4ನೇ ಬಾರಿಗೆ ಉನ್ನತ ಸಭೆ ಕರೆದಿದ್ದಾರೆ.
ಪ್ರಧಾನಿ ಮೋದಿ ಕರೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‍ಎಸ್‍ಎ) ಅಜಿತ್ ದೋವಲ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ : ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು
Advertisement
Advertisement
ಮೋದಿ ಅವರು ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಉಕ್ರೇನ್-ರಷ್ಯಾ ಯುದ್ಧಕ್ಕೆ ಭಾರತದ ಪ್ರತಿಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವರಿಸಿದರು ಎಂದು ಮೂಲಗಳು ತಿಳಿಸಿವೆ. ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಭಾರತದ ವಿಶೇಷ ರಾಯಭಾರಿಗಳಾಗಿ ನಾಲ್ವರು ಕೇಂದ್ರ ಸಚಿವರು ಉಕ್ರೇನ್‍ನ ನೆರೆಯ ರಾಷ್ಟ್ರಗಳಿಗೆ ತೆರಳಲು ಈ ಹಿಂದೆ ನಿರ್ಧರಿಸಲಾಗಿತ್ತು.
Advertisement
ಉಕ್ರೇನ್‍ನ ಖಾರ್ಕಿವ್‍ನಲ್ಲಿ ಅರ್ಖಿಟೆಕ್ಟೋರಾ ಬೆಕೆಟೋವಾ ಮೆಟ್ರೋ ನಿಲ್ದಾಣದ ಬಂಕರ್‍ನಿಂದ ದಿನಸಿ ವಸ್ತುಗಳನ್ನು ತರಲು ಹೊರಟ ನವೀನ್ ಮೇಲೆ ಖಾರ್ಕಿವ್‍ನ ಬೀದಿಯಲ್ಲಿ ಶೆಲ್ ದಾಳಿ ನಡೆಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯು ಸಾವನ್ನಪ್ಪಿದ್ದಾನೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿತ್ತು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ
Advertisement
ಕರ್ನಾಟಕದ ಹಾವೇರಿ ಮೂಲದ ಭಾರತೀಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಹಿನ್ನೆಲೆ ಪ್ರಧಾನಿ ಅವರು ವಿದ್ಯಾರ್ಥಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.