ನವದೆಹಲಿ: ದೆಹಲಿಯ ಕೆಂಪು ಕೋಟೆ (Delhi Blast) ಬಳಿ 12 ಮಂದಿಯನ್ನು ಬಲಿ ಪಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದಾರೆ.
ಇಂದು ಸಂಜೆ ತಮ್ಮ ನಿವಾಸದಲ್ಲಿ ಪ್ರಧಾನಿ ಮೋದಿ ಸಭೆ ಕರೆದಿದ್ದರು. ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆಗಳೊಂದಿಗೆ ನಂಟು; ಈ ಹಿಂದೆ ವಜಾಗೊಂಡಿದ್ದ ಪ್ರೊಫೆಸರ್ ನೇಮಿಸಿಕೊಂಡಿತ್ತು ಅಲ್ ಫಲಾಹ್ ವಿವಿ
ಎರಡು ದಿನಗಳ ಭೂತಾನ್ ಪ್ರವಾಸದಲ್ಲಿದ್ದ ಮೋದಿ ವಾಪಸ್ ಆಗಿದ್ದಾರೆ. ಆಸ್ಪತ್ರೆಗೆ ತೆರಳಿ ಸ್ಫೋಟದಲ್ಲಿ ಗಾಯಗೊಂಡಿದ್ದವರ ಆರೋಗ್ಯ ವಿಚಾರಿಸಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ, ದೆಹಲಿಯಲ್ಲಿ ನಡೆದ ಸ್ಫೋಟದ ಸಮಯದಲ್ಲಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಹೋಗಿ ಗಾಯಗೊಂಡವರನ್ನು ಭೇಟಿಯಾದೆ. ಎಲ್ಲರೂ ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಪಿತೂರಿಯ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಸೋಮವಾರ ಸಂಜೆ ಲಾಲ್ ಕ್ವಿಲಾ ಮೆಟ್ರೋ ನಿಲ್ದಾಣದ ಬಳಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದು ಸ್ಫೋಟಗೊಂಡು 12 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: Delhi Blast | ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿದ ನಮೋ
ಗೃಹ ಸಚಿವಾಲಯವು ಭಯೋತ್ಪಾದಕ ಸಂಚಿನ ಪುರಾವೆಗಳನ್ನು ಉಲ್ಲೇಖಿಸಿ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ಹಸ್ತಾಂತರಿಸಿತು. ಜೈಶ್-ಎ-ಮೊಹಮ್ಮದ್ ಬೆಂಬಲಿತ ಮಾಡ್ಯೂಲ್ 2008 ರ 26/11 ಮುಂಬೈ ಭಯೋತ್ಪಾದಕ ದಾಳಿಯಿಂದ ಪ್ರೇರಿತವಾಗಿ ದೆಹಲಿ, ಗುರುಗ್ರಾಮ್ ಮತ್ತು ಫರಿದಾಬಾದ್‌ನಾದ್ಯಂತ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತೆಂದು ತಿಳಿದುಬಂದಿದೆ.


