ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಕಳೆದ ನಾಲ್ಕು ದಿನಗಳಿಂದ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್‍ಕೌಂಟರ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಅವರೊಂದಿಗೆ ಸಭೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಭದ್ರತೆ ಸಂಬಂಧಿತ ಪರಿಸ್ಥಿತಿ ಮತ್ತು ಸಶಸ್ತ್ರ ಪಡೆಗಳು ಕೈಗೊಳ್ಳುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಂಪೂರ್ಣ ಅವಲೋಕನವನ್ನು ಈ ವೇಳೆ ಮಾಡಲಾಯಿತು. ಸಶಸ್ತ್ರ ಪಡೆಗಳ ಸಂಪೂರ್ಣ ಸಾಮಥ್ರ್ಯವನ್ನು ಭಯೋತ್ಪಾದನಾ ನಿಗ್ರಹಕ್ಕೆ ನಿಯೋಜಿಸಲು ಮೋದಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಬುಧವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದೆ. ಈ ವೇಳೆ ಯೋಧರೊಬ್ಬರು ಗಾಯಗೊಂಡಿದ್ದರು. ಕಳೆದ 96 ಗಂಟೆಗಳಲ್ಲಿ ದೋಡಾದಲ್ಲಿ ಇದು ಎರಡನೇ ದಾಳಿಯಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ನಾಲ್ಕನೇ ದಾಳಿಯಾಗಿದೆ.
Advertisement
ಬುಧವಾರ ದಕ್ಷಿಣದ ಕಥುವಾ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಎನ್‍ಕೌಂಟರ್ ನಡೆದಿತ್ತು. ಮಂಗಳವಾರ ಸಂಜೆ, ಚತ್ತರಗಲ್ಲ ಪಾಸ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಐವರು ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು.
Advertisement
ಮಂಗಳವಾರ ತಡರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ ಕಥುವಾ ಜಿಲ್ಲೆಯಲ್ಲಿ ಶಂಕಿತ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದರು. ಬುಧವಾರದಂದು ಮತ್ತೊಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ನಂತರ ಎನ್‍ಕೌಂಟರ್ ಕೊನೆಗೊಂಡಿತ್ತು. ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದರು.
ಜೂನ್ 9 ರಂದು, ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕರು ಬಸ್‍ನಲ್ಲಿ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಿ 9 ಜನರನ್ನು ಹತ್ಯೆಗೈದಿದ್ದರು.