ನವದೆಹಲಿ: ಸೇನಾ ಸಮವಸ್ತ್ರ ಧರಿಸಿ ಸೈನಿಕರ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಯುಪಿ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನರೇಂದ್ರ ಮೋದಿ ಅವರು 2020-21ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾಗ ಸೇನಾ ಸಮವಸ್ತ್ರ ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ನ್ಯಾಯಾಲಯ ಮೋದಿ ಅವರ ಕಚೇರಿಗೆ ನೋಟೀಸ್ ಜಾರಿ ಮಾಡಿದೆ. ಇದನ್ನೂ ಓದಿ: ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗ್ತಿದೆ: ಮುಫ್ತಿ
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ನೌಶೆರಾ ವಲಯದಲ್ಲಿ ಸೈನಿಕರ ಜೊತೆಗೆ ದೀಪಾವಳಿ ಆಚರಿಸಿದ್ದರು. ಈ ವೇಳೆ ಅವರು ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದರು. ಸೈನಿಕರನ್ನು ಉದ್ದೇಶಿಸಿ ಮಾತನಾಡಿ ಹಬ್ಬ ಶುಭ ಕೋರಿದ್ದರು.
Advertisement
#WATCH PM Narendra Modi pays tribute to soldiers who lost their lives in the line of duty, at Nowshera in Jammu and Kashmir pic.twitter.com/L5RRppPG3s
— ANI (@ANI) November 4, 2021
Advertisement
ಭೂಸೇನೆ, ನೌಕಾಪಡೆ, ವಾಯುಪಡೆ ಯೋಧರ ಸಮವಸ್ತ್ರ ಧರಿಸುವುದು ಮತ್ತು ಆರ್ಮಿಗೆ ಸಂಬಂಧಪಟ್ಟ ಯಾವುದೇ ವಸ್ತುಗಳನ್ನು ಬೇರೆಯವರು ಕೊಂಡೊಯ್ಯುವುದು, ಭಾರತೀಯ ದಂಡಸಂಹಿತೆ 140ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಹಿರಿಯ ವಕೀಲ ರಾಕೇಶ್ನಾಥ್ ಪಾಂಡೆಯ ಪ್ರಯಾಗ್ ರಾಜ್ನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾತ್ಸವ್ ಪ್ರಧಾನಿ ಕಾರ್ಯಾಲಯಕ್ಕೆ ನೋಟಿಸ್ ಕಳಿಸಿದ್ದಾರೆ.
Advertisement
ವಕೀಲ ಪಾಂಡೆಯವರು ಮೊದಲು 2021ರ ಡಿಸೆಂಬರ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಮುಖ್ಯ ನ್ಯಾಯಾಂಗ ಮೆಜಿಸ್ಟ್ರೇಟ್ ಹರೇಂದ್ರ ನಾಥ್ ಈ ಅರ್ಜಿಯನ್ನು ತಿರಸ್ಕರಿಸಿ, ಇದು ನಮ್ಮ ಕೋರ್ಟ್ನ ನ್ಯಯಾಂಗ ಆಡಳಿತದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಈ ವಿಷಯ ವಿಚಾರಣೆ ಮಾಡುವ ಅಧಿಕಾರ ವ್ಯಾಪ್ತಿ ಹೊಂದಿರುವ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿವುದು ಒಳಿತು ಎಂದು ಹೇಳಿದ್ದರು. ಪಿಎಂಗೆ ಯಾವುದೇ ನೋಟಿಸ್ ಕೊಟ್ಟಿರಲಿಲ್ಲ. ಇದೀಗ ಪ್ರಯಾಗ್ ರಾಜ್ ನ್ಯಾಯಾಲಯ ಪ್ರಧಾನಿ ಕಾರ್ಯಾಲಯಕ್ಕೆ ನೋಟಿಸ್ ಕೊಟ್ಟಿದ್ದು, ಮಾರ್ಚ್ 2ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.