ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ನಮ್ಮ ಹೆಣ್ಣು ಮಕ್ಕಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಮದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಹುಬ್ಬಳ್ಳಿ ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣವನ್ನು ಪ್ರಸ್ತಾಪಿಸಿದರು.
ಇಂದು ನಗರದ ಅರಮನೆ ಮೈದಾನಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬೀದಿಗಳಲ್ಲಿ ಬಾಂಬ್ ಸ್ಫೋಟವಾಗುತ್ತಿದೆ. ಭಜನೆ, ಕೀರ್ತನೆ ಹಾಕಿದರೆ ಹಲ್ಲೆ ಮಾಡುತ್ತಾರೆ. ಹಾಡಹಗಲೇ ಹಲ್ಲೆಗಳು ನಡೆಯುತ್ತಿವೆ. ಮಹಿಳೆಯರ ಮೇಲೆ ಹಲ್ಲೆಗಳು ಆಗ್ತಿದೆ. ಇದು ಸಾಮಾನ್ಯ ವಿಚಾರ ಅಲ್ಲ ಎಂದು ಮೋದಿ ಗುಡುಗಿದರು.
ಕಾಂಗ್ರೆಸ್ ಸರ್ಕಾರ ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿ ಹಾಳು ಮಾಡಿದೆ. ಟೆಕ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡ್ತಿಲ್ಲ ಎಂದು ಟೀಕೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಮೋದಿ
ಕಾಂಗ್ರೆಸ್ ಹೆಚ್‍ಎಎಲ್ ವಿಚಾರದಲ್ಲಿ ಏನೆಲ್ಲ ಆರೋಪ ಮಾಡಿತ್ತು. ಮೋದಿ ಹೆಸರು ಕೆಡಿಸಲು ಕಾಂಗ್ರೆಸ್ ಮುಂದಾಗಿತ್ತು. ಅದೇ ಹೆಚ್‍ಎಎಲ್ ಈಗ ಅನೇಕ ಸಾಧನೆ ಮಾಡಿದೆ. ರಾಜ್ಯದಲ್ಲಿ ದೊಡ್ಡ ಹೆಲಿಕಾಪ್ಟರ್ ನಿರ್ಮಾಣ ಕೈಗಾರಿಕೆ ಹೆಚ್‍ಎಎಲ್ ಸ್ಥಾಪಿಸಿದೆ. ಕಾಂಗ್ರೆಸ್ ತಂತ್ರಜ್ಞಾನದ ವಿರೋಧಿಯಾಗಿದೆ. ಇಡೀ ಜಗತ್ತು ಡಿಜಿಟಲ್ ಇಂಡಿಯಾ ಶ್ಲಾಘಿಸ್ತಿದೆ. ಕಾಂಗ್ರೆಸ್ ಕೊರೊನಾ ವೇಳೆ ವ್ಯಾಕ್ಸಿನ್ ವಿರುದ್ಧ ಅಪಪ್ರಚಾರ ಮಾಡಿತ್ತು ಎಂದು ರಾಜ್ಯ ಸರ್ಕಾರ ವಿರುದ್ಧ ಮೋದಿ ಕಿಡಿಕಾರಿದರು.