ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ (Rajiv Gandhi) 33 ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಯವರು ʼವೀರ ಭೂಮಿʼಯಲ್ಲಿ ರಾಜೀವ್ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
#WATCH | Congress president Mallikarjun Kharge, Congress Parliamentary Party Chairperson Sonia Gandhi and party MP Rahul Gandhi pay homage to former Prime Minister Rajiv Gandhi on his 33rd death anniversary at Vir Bhumi in Delhi. pic.twitter.com/hpfnXhcszo
— ANI (@ANI) May 21, 2024
ಈ ಸಂದರ್ಭದಲ್ಲಿ ಸಚಿನ್ ಪೈಲಟ್, ಪಿ ಚಿದಂಬರಂ, ಕೆಸಿ ವೇಣುಗೋಪಾಲ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಕೂಡ ಇವರಿಗೆ ಸಾಥ್ ನೀಡಿದರು.
ಇತ್ತ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕೂಡ ರಾಜೀವ್ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನನ್ನ ನಮನಗಳು ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ಪಾಸ್‍ಪೋರ್ಟ್ ರದ್ದು ಮಾಡಲು ಚಿಂತನೆ
On his death anniversary, my tributes to our former PM Shri Rajiv Gandhi Ji.
— Narendra Modi (@narendramodi) May 21, 2024
ರಾಜೀವ್ ಗಾಂಧಿ ಹತ್ಯೆ: 1991 ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಆತ್ಮಾಹುತಿ ಬಾಂಬ್ ದಾಳಿಯ ಮೂಲಕ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಹಂತಕರ ಜೊತೆಗೆ ಕನಿಷ್ಠ 14 ಮಂದಿ ಮೃತಪಟ್ಟಿದ್ದರು. ಆ ಬಳಿಕದಿಂದ ವಿಪಿ ಸಿಂಗ್ ಸರ್ಕಾರವು ಪ್ರತಿ ವರ್ಷ ಮೇ 21ನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಿತ್ತು. ಸದ್ಯ ಈ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಿಂದ ಭಯೋತ್ಪಾದನೆಯನ್ನು ತೊಡೆದುಹಾಕಲು ಪ್ರತಿಜ್ಞೆ ಮಾಡಲಾಗುತ್ತದೆ.