Connect with us

Latest

ಪುಲ್ವಾಮಾದಲ್ಲಿ ಮೋದಿಯಿಂದಲೇ 40 ಜನ ಯೋಧರ ಹತ್ಯೆ – ಕಾಂಗ್ರೆಸ್ ಮುಖಂಡ

Published

on

ಮುಂಬೈ: ಪುಲ್ವಾಮಾ ದಾಳಿಯ ಕುರಿತು ಮತ್ತೊಬ್ಬ ಕಾಂಗ್ರೆಸ್ ಮುಖಂಡ ವಿವಾದಾತ್ಮಕ ಹೇಳಿಕೆ ನೀಡಿ ನಾಲಿಗೆ ಹರಿಬಿಟ್ಟಿದ್ದಾರೆ.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 40 ಜನ ಯೋಧರನ್ನು ಕೊಲೆ ಮಾಡಿದ್ದಾರೆ ಎಂದು ಮಹಾರಾಷ್ಟ್ರದ ಮಾಜಿ ಶಿಕ್ಷಣ ಸಚಿವ, ಕಾಂಗ್ರೆಸ್ ಮುಖಂಡ ವಸಂತ್ ಪುರ್ಕೆ ಹೇಳಿದ್ದಾರೆ.

ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ನಮ್ಮ ದೇಶದ 40 ಜನ ಸೈನಿಕರನ್ನು ಕೊಲೆ ಮಾಡಿದರು. ಈ ಮೂಲಕ ನಮ್ಮ ಶತ್ರುಗಳನ್ನು ಅವರ ನೆಲದಲ್ಲಿಯೇ ಹತ್ಯೆ ಮಾಡುವ ನಾಟಕ ಮಾಡಿದರು ಎಂದು ಹೇಳಿ ವಾಗ್ದಾಳಿ ನಡೆಸಿದರು.

ಮಾಜಿ ಸಚಿವರ ಹೇಳಿಕೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಬಿಜೆಪಿ ನಾಯಕರು ಖಂಡಿಸಿದ್ದಾರೆ. ವಸಂತ್ ಪುರ್ಕೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಫೆ.14 ರಂದು ಗುರುವಾರ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಇಕೋ ಕಾರನ್ನು ಉಗ್ರ ಅದಿಲ್ ದಾರ್ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು.