ಬೆಳಗಾವಿ: ಲೋಕಸಭಾ ಮಹಾಸಮರದ (Lok Sabha Elections 2024) ಎರಡು ದಿನಗಳ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದಾರೆ. ಇಂದು ರಾತ್ರಿ ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shetter) ಹಾಗೂ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಮೋದಿ ಅವರು ಖಾಸಗಿ ಹೋಟೆಲ್‌ನತ್ತ ಪ್ರಯಾಣ ಬೆಳೆಸಿದರು. ಮೋದಿ ಆಗಮನದ ಹಿನ್ನೆಲೆ ಬೆಳಗಾವಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಇದನ್ನೂ ಓದಿ: ಏ.30 ಕ್ಕೆ ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ
ಪ್ರಪ್ರಥಮವಾಗಿ ಬೆಳಗಾವಿಯಲ್ಲಿ ವಾಸ್ತವ ಹೂಡಲಿರುವ ಪ್ರಧಾನಿ ಮೋದಿ ರಾಜ್ಯದ 11 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಲಿದ್ದಾರೆ.
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾಗಿರುವ ಲಿಂಗಾಯತ, ಮರಾಠಾ ಹಾಗೂ ಕುರುಬ ಸಮುದಾಯದ ಮತಗಳ ಬೇಟೆಗಾಗಿ ಸೂಪರ್ ಪ್ಲಾನ್ ಮಾಡಿ ಅದಕ್ಕೆ ಬೇಕಾದ ಭಾಷಣ ಮಾಡಲಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ನಾಡದ್ರೋಹಿ: ಡಿಕೆಶಿ ವಾಗ್ದಾಳಿ