ನವದೆಹಲಿ: ಬೆಂಗಳೂರಿನಿಂದ ಕನ್ಯಾಕುಮಾರಿ ವರೆಗೆ ಸೈಕಲ್ ಯಾನ ಮಾಡಿದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ (S.Suresh Kumar) ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಶ್ಲಾಘಿಸಿದ್ದಾರೆ.
ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ಮೋದಿ ಅಭಿನಂದನೆ ತಿಳಿಸಿದ್ದಾರೆ. ಶಾಸಕರ ಸಾಧನೆಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬ್ಯಾನರ್ ಗಲಾಟೆ – ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR
ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಶ್ರೀ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ… https://t.co/GdvNEgS8VN
— Narendra Modi (@narendramodi) January 1, 2026
ಪೋಸ್ಟ್‌ನಲ್ಲೇನಿದೆ?
ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಎಸ್.ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ. ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ ಎಂದು ಮೋದಿ ತಿಳಿಸಿದ್ದಾರೆ.
ಮೋದಿಯವರ ಶ್ಲಾಘನೆಗೆ ಶಾಸಕ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು ಇದೀಗ ನನಗೆ ಖುದ್ದಾಗಿ ಫೋನ್ ಮಾಡಿ ನಾನು ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಮಾಡಿದ್ದಕ್ಕೆ ಅಭಿನಂದಿಸಿ ನನಗೆ ಸ್ಫೂರ್ತಿ ನೀಡಿದರು. 51 ವರ್ಷಗಳ ನಂತರ ಮತ್ತೊಮ್ಮೆ ವಿವೇಕಾನಂದ ಶಿಲಾ ಸ್ಮಾರಕಕ್ಕೆ ನನ್ನ ಸ್ನೇಹಿತರ ಜೊತೆ ಸೈಕಲ್ ಸವಾರಿ ಮಾಡಿರುವುದು ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 2025 ರಲ್ಲಿ ನಮ್ಮ ತಂಡ 8,000 ಕಿಮೀ ದೂರದಷ್ಟು ಸೈಕ್ಲಿಂಗ್ ಮಾಡಿರುವ ಮಾಹಿತಿ ಪಡೆದು ತಮ್ಮ ಅಚ್ಚರಿ ಮತ್ತು ಸಂತಸ ಎರಡನ್ನೂ ವ್ಯಕ್ತಪಡಿಸಿದರು. ಅದರಲ್ಲೂ ತೀವ್ರ ಅನಾರೋಗ್ಯದ ನಂತರ ನಾನು ಈ ಕಾರ್ಯ ಕೈಗೊಂಡ ಬಗ್ಗೆ ಪ್ರಧಾನ ಮಂತ್ರಿಗಳು ನನ್ನ ಬೆನ್ನು ತಟ್ಟಿದ್ದು ನನ್ನ ಸುಕೃತ ಎಂದು ಖುಷಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್ ಪ್ರದರ್ಶಿಸಿದ ರೆಡ್ಡಿ
ಮಾಜಿ ಸಚಿವ ಸುರೇಶ್ ಕುಮಾರ್ ಅವರು ಬೆಂಗಳೂರಿನಿಂದ ಕನ್ಯಾಕುಮಾರಿ ವರೆಗೆ ಐದು ದಿನಗಳಲ್ಲಿ ಬರೋಬ್ಬರಿ 702 ಕಿಮೀ ವರೆಗೆ ಸೈಕಲ್ ಸವಾರಿ ಮಾಡಿ ಎಚ್ಚರ ಮೆಚ್ಚುಗೆ ಪಾತ್ರರಾಗಿದ್ದಾರೆ.

