ಹುಬ್ಬಳ್ಳಿ: ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.
ತಮಿಳುನಾಡಿನ ತಿರ್‍ಪುರ್ ನ ಸಮಾವೇಶ ಮುಗಿಸಿಕೊಂಡು ಮೋದಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ನೇರವಾಗಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ರಿಮೋರ್ಟ್ ಬಟನ್ ಒತ್ತುವ ಮೂಲಕ ಐಐಟಿ ಕಟ್ಟಡದ ಶಂಕುಸ್ಥಾಪನೆ, ಪೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕಕ್ಕೆ ಚಾಲನೆ, ನ್ಯಾಚುರಲ್ ಗ್ಯಾಸ್ ಔಟ್ಲೆಟ್, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ಲೋಕಾರ್ಪಣೆ ಹಾಗೂ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕಿಮ್ಸ್ ಕಟ್ಟಡ ಉದ್ಘಾಟಿಸಿದರು.
ಈ ವೇಳೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸದಾನಂದ ಗೌಡ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಸಚಿವರಾದ ಆರ್.ವಿ.ದೇಶಪಾಂಡೆ, ಸಂಸದ ಪ್ರಹ್ಲಾದ್ ಜೋಶಿ ಪ್ರಧಾನಿಗಳಿಗೆ ಸಾಥ್ ನೀಡಿದರು. ಗಂಡುಮೆಟ್ಟಿದ ನಾಡು ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ರಣಕಹಳೆ ಮೊಳಗಿಸಿದ್ದಾರೆ. ಇದೇ ತಿಂಗಳಲ್ಲಿ ಇನ್ನೆರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಫೆಬ್ರವರಿ 19ಕ್ಕೆ ಕಲಬುರಗಿಯಲ್ಲಿ ಸಮಾವೇಶ ನಡೆಸಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv