ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುವಿಗೆ ಭೇಟಿ ನೀಡಿದರು. ಇದೇ ವೇಳೆ 20,000 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.
ನಾನು ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಹೇಳಲು ಬಯಸುತ್ತೇನೆ. ನಿಮ್ಮ ಪೋಷಕರು ಮತ್ತು ಅಜ್ಜ-ಅಜ್ಜಿಯಂದಿರು ಅನುಭವಿಸಿದ ಕಷ್ಟಗಳನ್ನು ನೀವು ಎಂದಿಗೂ ಅನುಭವಿಸುವುದಿಲ್ಲ. ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ
ಈ ಬಾರಿಯ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಜಮ್ಮು ಕಾಶ್ಮೀರದಲ್ಲಿ ಈಗ ಪ್ರಜಾಪ್ರಭುತ್ವ ತಳಮಟ್ಟದಿಂದಲೇ ಕಾರ್ಯನಿರ್ವಹಿಸುತ್ತಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಕೇಂದ್ರಾಡಳಿತ ಪ್ರದೇಶವು ಅಭಿವೃದ್ಧಿಯ ಹೊಸ ಚರಿತ್ರೆ ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯದ ಏಳು ದಶಕಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕೇವಲ 17,000 ಕೋಟಿ ರೂ. ಖಾಸಗಿ ಹೂಡಿಕೆ ಬಂದಿದೆ. ಆದರೆ ಈಗ 38,000 ಕೋಟಿ ರೂ.ಗೆ ತಲುಪಿದೆ ಎಂದು ಒತ್ತು ಹೇಳಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್
48 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಎರಡು ಭಯೋತ್ಪಾದಕ ದಾಳಿಗಳನ್ನು ಕಂಡ ನಂತರ ಪ್ರಧಾನಿ ಮೋದಿ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಇಲ್ಲಿನ ಸುಂಜ್ವಾನ್‌ನಲ್ಲಿ ಭಯೋತ್ಪಾದಕರು ಬಸ್ ಮೇಲೆ ದಾಳಿ ನಡೆಸಿದಾಗ ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದರು.