ಪ್ರಧಾನಿ ಮೋದಿ ವಿದೇಶಿ ಪ್ರವಾಸ – ಪೋಲೆಂಡ್ ಮತ್ತು ಉಕ್ರೇನ್‌ಗೆ ಭೇಟಿ

Public TV
2 Min Read
PM Modi Poland Visit

– 40 ವರ್ಷಗಳ ಬಳಿಕ ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಮೊದಲು ಅವರು ಪೋಲೆಂಡ್‌ಗೆ ತೆರಳಲಿದ್ದಾರೆ. 45 ವರ್ಷಗಳ ಬಳಿಕ ಪೋಲೆಂಡ್‌ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿದ್ದಾರೆ. ಪ್ರವಾಸದಲ್ಲಿ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಡೊನಾಲ್ಡ್ ಟಸ್ಕ್ ಮತ್ತು ಅಧ್ಯಕ್ಷ ಆಂಡ್ರೆಜ್ ದುಡಾ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ.

ತಮ್ಮ ನಿರ್ಗಮನಕ್ಕೂ ಪ್ರಧಾನಿ ಕಚೇರಿಯಿಂದ ಹೇಳಿಕೆ ಬಿಡುಗಡೆಯಾಗಿದ್ದು ಹೇಳಿಕೆಯಲ್ಲಿ, ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳಿಗೆ 70 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಪೋಲೆಂಡ್‌ಗೆ ಭೇಟಿ ನೀಡುತ್ತಿದ್ದೇನೆ. ಮಧ್ಯ ಯೂರೋಪಿನಲ್ಲಿ ಪೋಲೆಂಡ್ ಪ್ರಮುಖ ಆರ್ಥಿಕ ಪಾಲುದಾರ ಮತ್ತು ಅಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸುವುದಾಗಿ ಹೇಳಿದ್ದಾರೆ.‌ ಇದನ್ನೂ ಓದಿ: ಇನ್ನು ಮುಂದೆ ಜಪಾನ್‌ಗೆ ಭಾರತದಿಂದ ಹಸಿರು ಅಮೋನಿಯಾ ರಫ್ತು

The first file signed by PM Narendra Modi pertains to PM Kisan Nidhi release

ರೈಲಿನಲ್ಲಿ ಉಕ್ರೇನ್‌ ಭೇಟಿ
ಪೋಲೆಂಡ್‌ನಿಂದ (Poland) ಪ್ರಧಾನಿ ಮೋದಿ ಆಗಸ್ಟ್ 23 ರಂದು ಐಷಾರಾಮಿ ‘ಟ್ರೇನ್ ಫೋರ್ಸ್ ಒನ್’ ನಲ್ಲಿ ಉಕ್ರೇನ್‌ಗೆ ಪ್ರಯಾಣಿಸಲಿದ್ದಾರೆ‌. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಉಕ್ರೇನ್ ಯುದ್ಧದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಪೋಲೆಂಡ್‌ನಿಂದ ನಾನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್‌ಕಿಯವರ ಆಹ್ವಾನದ ಮೇರೆಗೆ ಉಕ್ರೇನ್‌ಗೆ ಭೇಟಿ ನೀಡಲಿದ್ದೇನೆ. ಇದು ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಅಧ್ಯಕ್ಷ ಝೆಲೆನ್ಸ್‌ಕಿ ಅವರೊಂದಿಗೆ ಮಾತುಕತೆ ಅವಕಾಶವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಅವರು ತಮ್ಮ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾಕ್ಷ್ಯ ನೀಡಿದ್ರೆ ಝಾಕೀರ್‌ ನಾಯ್ಕ್‌ ಭಾರತಕ್ಕೆ ಹಸ್ತಾಂತರ – ಮಲೇಷ್ಯಾ ಪ್ರಧಾನಿ ಇಬ್ರಾಹಿಂ

ಉಕ್ರೇನ್ ಅನ್ನು ‘ಸ್ನೇಹಿತ’ ಮತ್ತು ‘ಪಾಲುದಾರ’ ಎಂದು ಕರೆದಿರುವ ಮೋದಿ ಶಾಂತಿ ಮತ್ತು ಸ್ಥಿರತೆ ಶೀಘ್ರದಲ್ಲೇ ಮರಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಭಾರತ ಉಕ್ರೇನ್ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Share This Article