ಪ್ಯಾರಿಸ್: ಎರಡು ದಿನಗಳ ಫ್ರಾನ್ಸ್ (France) ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಯುಎಇಯತ್ತ (UAE) ತಮ್ಮ ಪ್ರಯಾಣವನ್ನು ಬೆಳೆಸಿದರು.
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ (Emmanuel Macron) ಅವರೊಂದಿಗೆ ಮಾತುಕತೆ ನಡೆಸಿದ ಮೋದಿ, ಫ್ರಾನ್ಸ್‌ನ ಅತ್ಯುನ್ನತ ನಾಗರಿಕ ಮತ್ತು ಮಿಲಿಟರಿ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ (Grand Cross of the Legion) ಅನ್ನು ಗೌರವಪೂರ್ವಕವಾಗಿ ಸ್ವೀಕರಿಸಿದರು. ಇದನ್ನೂ ಓದಿ: Chandrayaan-3: ಚಂದ್ರನೂರಿಗೆ ಹಾರಿದ ರಾಕೆಟ್
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi), ಭಾರತ ಮತ್ತು ಫ್ರಾನ್ಸ್ ಬಾಂಧ್ಯವ್ಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿ ಯಶಸ್ವಿ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ಗೆ ವಿದಾಯ ಹೇಳಿದ್ದಾರೆ. ಮುಂದಿನ ಹಂತದ ಭೇಟಿಗಾಗಿ ಅವರು ಅಬುಧಾಬಿಗೆ (Abu Dhabi) ಪ್ರಯಾಣಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ
ಯುಎಇಗೆ ಪ್ರಯಾಣಿಸಿದ ಮೋದಿ ಅಲ್ಲಿನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (Sheikh Mohamed bin Zayed Al Nahyan) ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ಫಿನ್‌ಟೆಕ್, ರಕ್ಷಣೆ, ಭದ್ರತೆ ಮತ್ತು ಇಂಧನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮತ್ತು ಯುಎಇ ತೊಡಗಿಸಿಕೊಂಡಿವೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದ 1 ನಿರ್ಧಾರ – ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ವಾವಲಂಬಿಯಾದ ಭಾರತ
ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ಫ್ರಾನ್ಸ್ ಪ್ರವಾಸಕ್ಕೆ ತೆರಳಿದ್ದ ಮೋದಿ ಶುಕ್ರವಾರ ನಡೆದ ಬಾಸ್ಟಿಲ್ ಡೇ ಆಚರಣೆಯಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭ ರಕ್ಷಣೆ, ಬಾಹ್ಯಾಕಾಶ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಸ್ಪೆಷಲ್ ಟೊಮೆಟೋ ಫೋರ್ಸ್ ರಚಿಸಿ: ಅಖಿಲೇಶ್ ಯಾದವ್
Web Stories