ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡಿ ತಮ್ಮೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ.
ಫ್ಲೋರಿಡಾದಿಂದ ಜಾಯಿಂಟ್ ಬೇಸ್ ಆಂಡ್ರ್ಯೂಸ್‌ಗೆ ಹಿಂತಿರುಗುವಾಗ ಏರ್ ಫೋರ್ಸ್ ಒನ್‌ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸುದ್ದಿಗಾರರೊಂದಿಗೆ ಈ ವಿಚಾರ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಡಾಲರ್‌ಗೆ ಗುದ್ದು ಕೊಡಲು ʻಬ್ರಿಕ್ಸ್ʼ ಕರೆನ್ಸಿ – ಭಾರತಕ್ಕೆ ಏನು ಲಾಭ?
ನಾನು ಅವರೊಂದಿಗೆ ದೀರ್ಘ ಮಾತುಕತೆ ನಡೆಸಿದೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ. ಭಾರತದೊಂದಿಗೆ ನಮಗೆ ಉತ್ತಮ ಸಂಬಂಧವಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಭಾರತಕ್ಕೆ ಕೊನೆಯ ವಿದೇಶ ಪ್ರವಾಸ ಕೈಗೊಂಡಿದ್ದರು. ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಇಬ್ಬರೂ 2019ರ ಸೆಪ್ಟೆಂಬರ್‌ನಲ್ಲಿ ಹೂಸ್ಟನ್‌ನಲ್ಲಿ ಮತ್ತು 2020ರ ಫೆಬ್ರವರಿಯಲ್ಲಿ ಅಹಮದಾಬಾದ್‌ನಲ್ಲಿ ಎರಡು ರ‍್ಯಾಲಿಗಳಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಇದನ್ನೂ ಓದಿ: My Dear Friend – ಟ್ರಂಪ್ ಜೊತೆಗೆ ಮೋದಿ ದೂರವಾಣಿ ಸಂಭಾಷಣೆ
2024ರ ನವೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರು ಐತಿಹಾಸಿಕ ಗೆಲುವು ದಾಖಲಿಸಿದರು. ಟ್ರಂಪ್‌ಗೆ ಪ್ರಧಾನಿ ಮೋದಿ ವಿಶ್ ಮಾಡಿದ್ದರು.