ನವದೆಹಲಿ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ಗೆ (Devendra Fadnavis) ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ತುರ್ತು ಬುಲಾವ್ ನೀಡಿದ್ದಾರೆ.
ಆರ್‌ಎಸ್‌ಎಸ್ ಹಿನ್ನೆಲೆಯ ನಾಯಕರೇ ಮುಂದಿನ ಶಿಕ್ಷಣ ಸಚಿವರನ್ನಾಗಿ ಮಾಡಲು ಪ್ಲ್ಯಾನ್ ನಡೆಯುತ್ತಿದೆ. ಮೊದಲಿನಿಂದಲೂ ಆರ್‌ಎಸ್‌ಎಸ್ (RSS) ಹಿನ್ನೆಲೆಯವರನ್ನೇ ಕೆಲವು ಖಾತೆಗಳಿಗೆ ಮಂತ್ರಿ ಮಾಡುವ ಪರಂಪರೆ ಬಿಜೆಪಿಯಲ್ಲಿದೆ. ಇದರಿಂದ ಆರೆಸೆಸ್ ಹಿನ್ನೆಲೆಯ ದೇವೇಂದ್ರ ಫಡ್ನವೀಸ್ ಹೆಸರು ಮುನ್ನೆಲೆಗೆ ಬಂದಿದೆ. ಇದನ್ನೂ ಓದಿ: ಕೊನೆಗೂ ಸರ್ಕಾರ ತಲೆಬಾಗಲೇಬೇಕಾಯಿತು – ನೀಟ್ ಪರೀಕ್ಷೆಯಲ್ಲಿ ಸರ್ಕಾರ ಅಗತ್ಯ ಬದಲಾವಣೆ ತರಬೇಕು: ಕೇಜ್ರಿವಾಲ್ ಒತ್ತಾಯ
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಿಂದ ತೆರವಾದ ಶಿಕ್ಷಣ ಸಚಿವ ಸ್ಥಾನಕ್ಕೆ ದೇವೆಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಬಹುದು ಎಂದು ಭಾವಿಸುತ್ತೇನೆ ಎಂದಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ. ಇದನ್ನೂ ಓದಿ: ಪ್ರತಿಭಟನೆ ಬಿಸಿಗೆ ಕೇಂದ್ರ ಸಚಿವರ ರಾಜೀನಾಮೆ – 2018ರಲ್ಲಿ ಎಂಜೆ ಅಕ್ಬರ್ ಬಳಿಕ ಇದೇ ಮೊದಲು
