LatestMain PostNational

ಗುಜರಾತ್‍ನಲ್ಲಿ ತಾಯಿ ಹೀರಾಬೆನ್‌ರನ್ನು ಭೇಟಿಯಾದ ಮೋದಿ

ಗಾಂಧಿನಗರ: ಗುಜರಾತಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಅವರನ್ನು ಶನಿವಾರ ಸಂಜೆ ಭೇಟಿಯಾಗಿದ್ದಾರೆ.

ಎರಡು ದಿನಗಳ ಕಾಲ ಗುಜರಾತ್‍ಗೆ ಭೇಟಿ ನೀಡಿರುವ ಮೋದಿ ಅವರು ಶನಿವಾರ ಅಹಮದಾಬಾದ್‍ನಲ್ಲಿ ನಡೆದ ಖಾದಿ ಉತ್ಸವದಲ್ಲಿ ಭಾಗವಹಿಸಿದರು. ನಂತರ ಸಂಜೆ ಗಾಂಧಿನಗರದ ರೈಸನ್ ಪ್ರದೇಶದಲ್ಲಿರುವ ನಿವಾಸದಲ್ಲಿ ಹೀರಾಬೆನ್ ಅವರನ್ನು ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಹೊತ್ತು ಕಾಲ ಕಳೆದರು ಎಂದು ಅವರ ಕಿರಿಯ ಸಹೋದರ ಪಂಕಜ್ ಮೋದಿ ಹೇಳಿದ್ದಾರೆ.

ಭಾನುವಾರ ಕಛ್ ಮತ್ತು ಗಾಂಧಿನಗರದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಶನಿವಾರ ರಾತ್ರಿ ಗಾಂಧೀನಗರದಲ್ಲಿಯೇ ಕಳೆದಿದ್ದಾರೆ. ಇದನ್ನೂ ಓದಿ: ಮುಂಬರುವ ಹಬ್ಬಗಳಲ್ಲಿ ಖಾದಿ ಉತ್ಪನ್ನಗಳನ್ನೇ ಗಿಫ್ಟ್ ಕೊಡಿ – ಜನರಿಗೆ ಮೋದಿ ಕರೆ

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಖಾದಿ ಮಹತ್ವವನ್ನು ನೆನಪಿಸಿಕೊಳ್ಳುವ ಸಲುವಾಗಿ ಸಾಬರಮತಿ ನದಿ ತೀರದಲ್ಲಿಂದು ಆಯೋಜಿಸಿದ್ದ `ಖಾದಿ ಉತ್ಸವ’ದಲ್ಲಿ ಮಾತನಾಡಿದ ಅವರು, ಚರಕದೊಂದಿಗೆ ತಾವು ಹೊಂದಿದ್ದ ಸಂಬಂಧವನ್ನು ಮತ್ತು ತಮ್ಮ ಬಾಲ್ಯದ ದಿನಗಳಲ್ಲಿ ತಮ್ಮ ತಾಯಿ ಚರಕದಲ್ಲಿ ಕೆಲಸ ಮಾಡುತ್ತಿದ್ದದ್ದನ್ನು ನೆನಪಿಸಿಕೊಂಡರು.

ಮುಂಬರುವ ಹಬ್ಬಗಳಲ್ಲಿ ಈ ಬಾರಿ ಖಾದಿ ಗ್ರಾಮೋದ್ಯೋಗದಲ್ಲಿ ತಯಾರಿಸಿದ ಖಾದಿ ಉತ್ಪನ್ನಗಳನ್ನೇ ಉಡುಗೊರೆಯಾಗಿ ಕೊಡಿ. ನೀವು ಹಲವು ರೀತಿಯ ಬಟ್ಟೆಗಳನ್ನು ಹೊಂದಿರಬಹುದು. ಆದರೆ ಖಾದಿಗೆ ಸ್ಥಾನ ನೀಡಿದರೆ `ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗಲಿದೆ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಂಗಳೂರಿನಲ್ಲೂ ರಸ್ತೆಗುಂಡಿಗಳ ದರ್ಬಾರ್- ಹೊಂಡ ಫೋಟೋ ಕಳಿಸಿದ್ರೆ ಸಿಗುತ್ತೆ ಬಹುಮಾನ

Live Tv

Leave a Reply

Your email address will not be published.

Back to top button