ವ್ಯಾಟಿಕನ್ ಸಿಟಿ: ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರೋಮ್ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಭಾರತಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.
Advertisement
ಪೋಪ್ ಫ್ರಾನ್ಸಿಸ್ ಮತ್ತು ಪ್ರಧಾನಿ ಮೋದಿ ಜೊತೆ 20 ನಿಮಿಷ ಮಾತುಕತೆ ನಿಗದಿಯಾಗಿತ್ತು. ಆದರೆ ಇವರಿಬ್ಬರು ಒಂದು ಗಂಟೆಗೂ ಹೆಚ್ಚು ಸಮಯ ಮಾತುಕತೆ ಮಾಡಿದ್ದಾರೆ. ಇದನ್ನೂ ಓದಿ: ಏನು ಹೇಳುತ್ತೇನೋ ಅದನ್ನೇ ಮಾಡುತ್ತೇನೆ, ವಿಶ್ವಾಸ ಉಳಿಸಿಕೊಳ್ಳುತ್ತೇನೆ: ರಾಹುಲ್ ಗಾಂಧಿ
Advertisement
Had a very warm meeting with Pope Francis. I had the opportunity to discuss a wide range of issues with him and also invited him to visit India. @Pontifex pic.twitter.com/QP0If1uJAC
— Narendra Modi (@narendramodi) October 30, 2021
Advertisement
ಪ್ರಮುಖವಾಗಿ ಕೋವಿಡ್-19, ಹವಾಮಾನ ವೈಪರೀತ್ಯ, ಬಡತನ ನಿರ್ಮೂಲನೆ ಸೇರಿದಂತೆ ಹಲವು ಮಹತ್ವದ ವಿಚಾರ ಚರ್ಚೆಗೆ ಬಂದಿತ್ತು ಎಂದು ಮೂಲಗಳಿಂದ ವರದಿಯಾಗಿದೆ. ಚರ್ಚೆ ವೇಳೆ ಮೋದಿ ಜೊತೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್, ವಿದೇಶಾಂಗ ಸಚಿವರಾದ ಡಾ. ಎಸ್ ಜೈಶಂಕರ್ ಜೊತೆಗಿದ್ದರು. ಇದನ್ನೂ ಓದಿ: ತಂದೆ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ
Advertisement
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೋದಿ, ಪೋಪ್ ಫ್ರಾನ್ಸಿಸ್ ಅವರೊಂದಿಗೆ ಸೌಹಾರ್ದಯುತವಾದ ಭೇಟಿ ನಡೆಸಿದ್ದೇವು. ಅವರೊಂದಿಗೆ ಮಾತುಕತೆ ನಡೆಸಲು ಒಂದು ಅವಕಾಶ ಸಿಕ್ಕಿತು. ಈ ವೇಳೆ ಅವರನ್ನು ಭಾರತಕ್ಕೆ ಬರುವಂತೆ ಆಹ್ವಾನ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜಕುಮಾರನಂತೆ ಬಾಳಬೇಕಿದ್ದ ನನ್ನ ತಮ್ಮ ಇನ್ನಿಲ್ಲ ಅಂತಂದ್ರೆ ನಂಬಲು ಅಸಾಧ್ಯ: ಸುಧಾರಾಣಿ