ನವದೆಹಲಿ: ನರೇಂದ್ರ ಮೋದಿಯವರು (Narendra Modi) ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿದ ನರೇಂದ್ರ ಮೋದಿಯವರು ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೇ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ಮನವಿ ಮಾಡಿದ್ದಾರೆ.
Advertisement
Advertisement
ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ 292 ಸ್ಥಾನಗಳನ್ನು ಗೆದ್ದಿದ್ದು, ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರ ನಡೆಸುವುದು ಖಚಿತವಾಗಿದೆ. ಆದರೆ ಬಿಜೆಪಿ ಗೆದ್ದರೂ ಮಿತ್ರ ಪಕ್ಷಗಳ ಬೆಂಬಲದಿಂದ ಬಹುಮತ ಸಾಬೀತು ಪಡಿಸಬೇಕಿದೆ. ಈ ಮೂಲಕ 10 ವರ್ಷಗಳ ನಂತರ ದೇಶದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಒಂದು ಕ್ಷೇತ್ರದ ಸೋಲು – ಮತ್ತೆ ಎನ್‌ಡಿಎಗೆ ಸೇರ್ತಾರಾ ಉದ್ಧವ್?