ಹಿರಿಯ ನಟ ನಾನಾ ಪಾಟೇಕರ್ (Nana Patekar) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಾಂತ್ವನ ಹೇಳಿದ್ದಾರೆ.
ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯ ಸ್ತಂಭನದಿಂದ ಹಿರಿಯ ನಟ ನಾನಾ ಪಾಟೇಕರ್ ಗುರುವಾರ ಬೆಳಗ್ಗೆ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ: ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ
Few actors possessed the intensity, individuality and unmistakable presence that Shri Nana Patekar Ji had. He brought remarkable versatility and creativity to every role and gave us characters that will be remembered for generations. He was also admired for his frank and forthright views, never hesitating to express what he believed in.
Shri Nana Patekar’s contribution to Hindi and Marathi cinema was immense. His passing leaves a deep void. My condolences to his family, friends and countless admirers. Om Shanti.
— Narendra Modi (@narendramodi) October 8, 2026
‘ಎಕ್ಸ್’ ಖಾತೆಯಲ್ಲಿ ಪ್ರಧಾನಿ ಮೋದಿ ಅವರು ಪಾಟೇಕರ್ ಅವರ ಬಹುಮುಖಿ ಪ್ರತಿಭೆ, ಸೃಜನಶೀಲತೆ ಮತ್ತು ಅವರು ನಿರ್ವಹಿಸಿದ ಮರೆಯಲಾಗದ ಪಾತ್ರಗಳನ್ನು ಸ್ಮರಿಸಿದರು. ಜೊತೆಗೆ, ನಟನ ಮುಕ್ತ ಹಾಗೂ ನೇರ ನುಡಿಯ ಸ್ವಭಾವವನ್ನೂ ಶ್ಲಾಘಿಸಿದ್ದಾರೆ.
ನಾನಾ ಪಾಟೇಕರ್ ಅವರಲ್ಲಿದ್ದಂತಹ ನಟನ ತೀವ್ರತೆ, ವಿಶಿಷ್ಟ ವ್ಯಕ್ತಿತ್ವ ಮತ್ತು ಪ್ರಭಾವಶಾಲಿ ಉಪಸ್ಥಿತಿಯು ಕೆಲವೇ ಕೆಲವು ನಟರಲ್ಲಿ ಮಾತ್ರ ಕಂಡುಬರುತ್ತದೆ. ಅವರು ತಾವು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ಅದ್ಭುತವಾದ ವೈವಿಧ್ಯತೆ ಹಾಗೂ ಸೃಜನಶೀಲತೆಯನ್ನು ತುಂಬಿದರು. ಮುಂದಿನ ತಲೆಮಾರುಗಳವರೆಗೆ ನೆನಪಿನಲ್ಲಿ ಉಳಿಯುವಂತಹ ಪಾತ್ರಗಳನ್ನು ನಮಗೆ ನೀಡಿದರು. ತಮ್ಮ ನಂಬಿಕೆಗಳನ್ನು ವ್ಯಕ್ತಪಡಿಸಲು ಎಂದಿಗೂ ಹಿಂಜರಿಯದ, ಮುಕ್ತ ಹಾಗೂ ನೇರವಾದ ಅಭಿಪ್ರಾಯಗಳಿಗಾಗಿಯೂ ಅವರು ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಮೋದಿ ಸ್ಮರಿಸಿದ್ದಾರೆ. ಇದನ್ನೂ ಓದಿ: 4 ದಿನದ ಹಿಂದೆ ಲವಲವಿಕೆಯಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಾಟೇಕರ್
ಹಿಂದಿ ಮತ್ತು ಮರಾಠಿ ಚಿತ್ರರಂಗಕ್ಕೆ ಪಾಟೇಕರ್ ನೀಡಿದ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಿ ಮೋದಿ, ಅವರ ನಿಧನವು ಆಳವಾದ ಶೂನ್ಯವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಎಂದಿದ್ದಾರೆ.

