ರಾಯಚೂರು: ಭಾರತ ಸರ್ಕಾರ ಹಾಗೂ ಸರ್ವ ಶಿಕ್ಷಣ ಕರ್ನಾಟಕ ಸಹಯೋಗದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಜಿಲ್ಲೆಯ ಲಿಂಗಸುಗೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಮೋದಿ ಜೊತೆ ಪರೀಕ್ಷಾ ಪೇ ಚರ್ಚೆಗೆ ಚಿಕ್ಕಬಳ್ಳಾಪುರದ ವಿದ್ಯಾರ್ಥಿ ಆಯ್ಕೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಜನವರಿ 20 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ. ಲಿಂಗಸುಗೂರಿನ ಸರ್ಕಾರಿ ಪ್ರೌಢಶಾಲೆಯ ಗುಂಡಮ್ಮ ಹಾಗೂ ಜ್ಞಾನ ಸಂಜೀವಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಯಶಸ್ವಿನಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ಗಡಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
Advertisement
Advertisement
ರಾಜ್ಯದಿಂದ ಒಟ್ಟು 42 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಜಿಲ್ಲೆಯಿಂದ ಈ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಪ್ರಧಾನಿ ಜೊತೆ ಮಾತನಾಡಲು ಅವಕಾಶ ಸಿಕ್ಕರೆ ರಾಜ್ಯದ ಪ್ರವಾಹದ ಪರಿಹಾರ ಬಗ್ಗೆ, ವಿದ್ಯಾರ್ಥಿನಿಯರ ರಕ್ಷಣೆ ಬಗ್ಗೆ ಮತ್ತು ಪರೀಕ್ಷಾ ಭಯದ ಬಗ್ಗೆ ಪ್ರಶ್ನೆ ಕೇಳುವುದಾಗಿ ವಿದ್ಯಾರ್ಥಿನಿಯರು ಹೇಳಿದ್ದಾರೆ.