ಮಥುರಾ: ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ಲಾಸ್ಟಿಕ್ ಬೇರ್ಪಡಿಸುವ ಮಹಿಳೆಯರೊಂದಿಗೆ ಕುಳಿತು ಕಸದಿಂದ ಪ್ಲಾಸ್ಟಿಕ್ ವಸ್ತುಗಳನ್ನು ಬೇರ್ಪಡಿಸಿದರು.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಇಂದು ಪ್ರಧಾನಿಗಳು ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಥುರಾದಲ್ಲಿ ಕಸದಿಂದ ಪ್ಲಾಸ್ಟಿಕ್ ಬೇರ್ಪಡಿಸುವ ಮಹಿಳೆಯರನ್ನು ಕಂಡು ಅವರಿಗೆ ಸಹಾಯವನ್ನು ಮಾಡಿದ್ದಾರೆ. ಆ ಮೂಲಕ ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ (ಸಿಂಗಲ್ ಯೂಸ್ ಪ್ಲಾಸ್ಟಿಕ್) ಬಳಕೆಯನ್ನು ನಿಲ್ಲಿಸಲು ಸಂದೇಶ ನೀಡಿದ್ದಾರೆ.
Advertisement
Advertisement
ಮಹಿಳೆಯರೊಂದಿಗೆ ನೆಲದ ಮೇಲೆ ಕುಳಿತು ಪ್ರಧಾನಿ ನರೇಂದ್ರ ಮೋದಿ ಅವರು ಪ್ಲಾಸ್ಟಿಕ್ ವಸ್ತುಗಳನ್ನು ಕಸದಿಂದ ಬೇರ್ಪಡಿಸುತ್ತಿರುವ ಫೋಟೋ ಕಾಣಬಹುದಾಗಿದೆ. ಸುಮಾರು 25ಕ್ಕೂ ಹೆಚ್ಚು ಮಹಿಳೆಯರು ಈ ಸಂದರ್ಭದಲ್ಲಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಮೋದಿ ಅವರು ತಮ್ಮನ್ನು ಭೇಟಿ ಮಾಡಿದ್ದ ಮಹಿಳೆಯರಿಂದ ಅವರು ಎದುರಿಸುವಂತಹ ಸಮಸ್ಯೆಗಳು ಸೇರಿದಂತೆ ಇತರೇ ಅಂಶಗಳ ಬಗ್ಗೆ ಪ್ರಶ್ನಿಸಿ ಮಾಹಿತಿ ಪಡೆದಿದ್ದಾರೆ. ಆ ಬಳಿಕ 25 ಮಹಿಳೆಯರಿಗೆ ಪುರಸ್ಕಾರ ನೀಡಿದ್ದಾರೆ.
Advertisement
ಸೋಮವಾರವಷ್ಟೇ ದೇಶದಲ್ಲಿ ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ವಸ್ತುಗಳನ್ನು ಬ್ಯಾನ್ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದರು. ಅಲ್ಲದೇ ಪ್ಲಾಸ್ಟಿಕ್ ಬದಲಾಗಿ ಪರಿಸರ ಸ್ನೇಹಿ ಬದಲಿ ಉತ್ಪನ್ನಗಳ ಅಭಿವೃದ್ಧಿಗೆ ಪರಿಣಾಮ ಕ್ರಮಕೈಗೊಳ್ಳು ಬದ್ಧರಾಗಿದ್ದೇವೆ ಎಂದು ಹೇಳಿದ್ದರು.
Advertisement
Addressing a public meeting in Mathura. Watch. https://t.co/WDt31a6P2T
— Narendra Modi (@narendramodi) September 11, 2019
73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ಲಾಸ್ಟಿಕ್ ವಿರುದ್ಧ ಸಮರಕ್ಕೆ ಕರೆ ನೀಡಿದ್ರು. ಪ್ಲಾಸ್ಟಿಕ್ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾಗ್ ಬಳಕೆ ಮಾಡುವ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದ್ದರು. ಇದೀಗ ಈ ಆಶಯದ ಭಾಗವಾಗಿ ಅಕ್ಟೋಬರ್ 2 ರಿಂದ 6 ಬಗೆಯ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧ ಮಾಡಿದ್ದಾರೆ. ಈಗಾಗಲೇ ವಿಶ್ವದ 127 ರಾಷ್ಟ್ರಗಳು ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಿವೆ.
Mathura: Prime Minister Narendra Modi meets women who pick plastic from garbage and extends a helping hand to them. PM will launch a campaign against single-use plastic products, today. pic.twitter.com/FZrFuJSuco
— ANI UP/Uttarakhand (@ANINewsUP) September 11, 2019