ದುಬೈ: 2028 ರಲ್ಲಿ ಭಾರತದಲ್ಲಿ (India) COP33 ಶೃಂಗಸಭೆಯನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಸ್ತಾಪಿಸಿದ್ದಾರೆ.
ದುಬೈನಲ್ಲಿ (Dubai) ನಡೆಯುತ್ತಿರುವ ಸಿಒಪಿ-28 ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ, ಭಾರತದ ಜನಸಂಖ್ಯೆಯು ಜಾಗತಿಕ ಜನಸಂಖ್ಯೆಯ ಶೇ.17 ರಷ್ಟಿದೆ. ಆದರೆ ಜಾಗತಿಕ ಇಂಗಾಲದ ಹೊರಸೂಸುವಿಕೆಯಲ್ಲಿ ಭಾರತದ ಪಾತ್ರ ಕೇವಲ 4% ನಷ್ಟಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: COP28 Summit: ದುಬೈ ತೆರಳಿದ ಮೋದಿಗೆ ಅದ್ಧೂರಿ ಸ್ವಾಗತ – ಹಿಂದೂಸ್ತಾನ್ ಹಮಾರ ಎಂದ ಭಾರತೀಯರು
Advertisement
Advertisement
ಜನಸಂಖ್ಯೆಯು ತುಂಬಾ ಕಡಿಮೆ ಇರುವ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆಯಾಗಿದೆ. ಜಾಗತಿಕ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿತಗೊಳಿಸಲು ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಂದು ಕರೆ ನೀಡಿದ್ದಾರೆ.
Advertisement
NDC ಗುರಿಗಳನ್ನು ಸಾಧಿಸುವಲ್ಲಿ ನಾವು ವೇಗವಾಗಿ ಸಾಗುತ್ತಿದ್ದೇವೆ. ವಾಸ್ತವವಾಗಿ, ನಾವು ಗಡುವಿನ ಒಂಬತ್ತು ವರ್ಷಗಳ ಮೊದಲು ನಮ್ಮ ಪಳೆಯುಳಿಕೆಯಲ್ಲದ ಇಂಧನ ಗುರಿಗಳನ್ನು ತಲುಪಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಮಹಿಳೆಯರು 8 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ: ಪುಟಿನ್ ಕರೆ
Advertisement
ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ ಸಿಒಪಿ 28ರ ಉನ್ನತ ಮಟ್ಟದ ವಿಭಾಗವಾಗಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಕುರಿತು ಚರ್ಚಿಸಲು ಹಲವಾರು ವಿಶ್ವ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.