ನವದೆಹಲಿ: ಮುಂಬೈನ ಅಟಲ್ ಸೇತು (Atal Setu Mumbai) ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯೆ ನೀಡಿದ್ದಾರೆ.
ಅಟಲ್ ಸೇತು ಬಗ್ಗೆ ನಟಿ ಹೆಮ್ಮೆಯ ಮಾತುಗಳನ್ನಾಡಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನರೇಂದ್ರ ಮೋದಿ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣಗೆ ಚೇತನ್ ಟಾಂಗ್
Advertisement
Absolutely! Nothing more satisfying than connecting people and improving lives. https://t.co/GZ3gbLN2bb
— Narendra Modi (@narendramodi) May 16, 2024
Advertisement
ಈಚೆಗೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ಅಟಲ್ ಸೇತು (ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಹೆಮ್ಮೆಯಿಂದ ಮಾತನಾಡಿದ್ದರು.
Advertisement
ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಭೇಟಿ ಬಳಿಕ ಬದಲಾಯ್ತು ಕ್ಷೌರದಂಗಡಿ ಲಕ್ – ಅಂಗಡಿಗೆ ಗ್ರಾಹಕರ ದಂಡು
Advertisement
ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ಮಾತನಾಡಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಸಾಧನೆಯನ್ನು ನಟಿ ಕೊಂಡಾಡಿದ್ದರು.