– ಎನ್‌ಸಿಪಿ ನಾಯಕ ಶರದ್ ಪವಾರ್ ಜೊತೆ ವೇದಿಕೆ ಹಂಚಿಕೊಂಡ ಪಿಎಂ
ಮಹಾರಾಷ್ಟ್ರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮಂಗಳವಾರ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ (Lokmanya Tilak National Award) ಪ್ರದಾನ ಮಾಡಲಾಯಿತು. ಪ್ರಶಸ್ತಿ ಮೊತ್ತದ 1 ಲಕ್ಷ ರೂ.ಗಳನ್ನು ನಮಾಮಿ ಗಂಗೆ ಯೋಜನೆಗೆ (Namami Gange Project) ನೀಡುವುದಾಗಿ ಮೋದಿ ಘೋಷಿಸಿದ್ದಾರೆ.
Advertisement
ಪುಣೆಯಲ್ಲಿ (Pune) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಿಲಕ್ ಅವರ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸಿರುವುದು ನನಗೆ ಗೌರವ ತಂದಿದೆ. ಪ್ರಶಸ್ತಿಯ ಹಣವನ್ನು ನಮಾಮಿ ಗಂಗೆ ಯೋಜನೆಗೆ ನೀಡಲು ನಿರ್ಣಯಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ನಿಲ್ಲದ ಕೋಮು ಘರ್ಷಣೆ – ನಾಲ್ವರು ಸಾವು; 30 ಕ್ಕೂ ಹೆಚ್ಚು ಮಂದಿಗೆ ಗಾಯ
Advertisement
Advertisement
ಪ್ರಶಸ್ತಿ ಸ್ವೀಕರಿಸಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪ್ರಶಸ್ತಿ ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಈ ದಿನ ನನಗೆ ಬಹಳ ಮುಖ್ಯವಾದ ಹಾಗೂ ನೆನಪಿನಲ್ಲಿರುವ ದಿನ. ಸ್ವಾತಂತ್ರ್ಯ ಹೋರಾಟದಲ್ಲಿ ತಿಲಕ್‌ರ ಪಾತ್ರವನ್ನು ಪದಗಳಲ್ಲಿ ಅಥವಾ ಕೆಲವು ಘಟನೆಗಳ ಮೂಲಕ ಹೇಳಲು ಸಾಧ್ಯವಿಲ್ಲ. ಈ ಪ್ರಶಸ್ತಿಯನ್ನ ದೇಶದ 140 ಕೋಟಿ ಜನರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
Advertisement
ಪಿಎಂ ಮೋದಿ ಅವರ ಸನ್ಮಾನ ಸಮಾರಂಭದಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್ ಹಾಜರಿದ್ದರು. ತನ್ನ ಚಿಕ್ಕಪ್ಪನ ವಿರುದ್ಧವೇ ಬಂಡಾಯವೆದ್ದ ಮತ್ತು ರಾಜ್ಯದಲ್ಲಿ ಎನ್‌ಡಿಎ ಸರ್ಕಾರಕ್ಕೆ ಸೇರಲು ಎನ್‌ಸಿಪಿ ಹಲವು ಶಾಸಕರೊಂದಿಗೆ ವಿಭಜನೆಯಾಗಿದ್ದ ಅಜಿತ್ ಪವಾರ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯೆ ಕೇಸ್ – ಅಜರ್‌ಬೈಜಾನ್‌ನಿಂದ ಆರೋಪಿ ಸಚಿನ್ ಬಿಷ್ಣೋಯ್ ಭಾರತಕ್ಕೆ ಹಸ್ತಾಂತರ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವು ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರವನ್ನು ಸೇರುವುದರೊಂದಿಗೆ ಪವಾರ್ ಅವರ ಪಕ್ಷವು ಇತ್ತೀಚೆಗೆ ವಿಭಜನೆಯಾಗಿತ್ತು.
Web Stories