ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ

Public TV
3 Min Read
Modi Meeting

ನವದೆಹಲಿ: ಚೀನಾ (China), ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಅಬ್ಬರ ಹೆಚ್ಚಾಗಿದೆ. ಭಾರತಕ್ಕೂ ಈಗಾಗಲೇ ಒಮಿಕ್ರಾನ್ (Omicron) ಉಪತಳಿ ಬಿಎಫ್.7 (BF.7 Variant) ಲಗ್ಗೆಯಿಟ್ಟಿದೆ. ಈ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಸಲಾಯಿತು.

CORONA 1

ಸಭೆ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ, ಮಾಸ್ಕ್ (Mask) ಧರಿಸುವುದು ಕಡ್ಡಾಯವಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಜೊತೆಗೆ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯನ್ನು ಹೆಚ್ಚಳ ಮಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ. ಬಳಿಕ ಮಾಸ್ಕ್ ಧರಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಕೋವಿಡ್ (Covid) ಉಪತಳಿಯ ಬಗ್ಗೆ ಕಣ್ಗಾವಲು ಇರಿಸುವ ಬಗ್ಗೆ ಪ್ರತಿಪಾದಿಸಲಾಯಿತು.

CORONA

ವರ್ಚುವಲ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಈಗಾಗಲೇ ಭಾರತದಲ್ಲಿ ಪತ್ತೆಯಾಗಿದ್ದ ಎಲ್ಲಾ 4 ಬಿಎಫ್.7 ಸೋಂಕು ಪ್ರಕರಣಗಳಲ್ಲೂ ರೋಗಿಗಳು ಚೇತರಿಕೆ ಕಂಡು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಹೀಗಾಗಿ ಈ ಉಪ ರೂಪಾಂತರಿ ಕುರಿತಾಗಿ ಜನತೆ ಆತಂಕ ಪಡುವ ಅಗತ್ಯತೆ ಸದ್ಯಕ್ಕೆ ಇಲ್ಲ ಎಂದು ಅಭಯ ನೀಡಿದರು.

ಆದಾಗ್ಯೂ ದೇಶದ ಎಲ್ಲಾ ರಾಜ್ಯ ಸರ್ಕಾರಗಳೂ (State Government) ಕೋವಿಡ್‌ನ ಮತ್ತೊಂದು ಸಂಭಾವ್ಯ ಅಲೆ ಎದುರಿಸಲು ಆಸ್ಪತ್ರೆಗಳು ಸುಸಜ್ಜಿತವಾಗಿರಬೇಕು. ಮೂಲಸೌಕರ್ಯ ಸಂಬಂಧಿ ಸಮಸ್ಯೆಗಳಿದ್ದರೇ ಈಗಲೇ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದರು. ಇದನ್ನೂ ಓದಿ: ಹೊಸ ವರ್ಷ.. ಹಳೇ ವೈರಸ್‌; ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ – ಭಾರತದ ಕಥೆ ಏನು?

ಇನ್ನೂ ದೇಶಾದ್ಯಂತ ವಯಸ್ಕರಿಗೆ ಆದಷ್ಟು ಶೀಘ್ರವಾಗಿ ಮುನ್ನೆಚ್ಚರಿಕೆ ಡೋಸ್ ನೀಡುವ ಸಂಬಂಧ ಕ್ರಮ ವಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಬಳಿಕ ದೇಶಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಔಷಧಗಳ ಸಂಗ್ರಹ, ಲಸಿಕೆ ಇದೆ ಎಂಬ ಮಾಹಿತಿಯನ್ನು ಪ್ರಧಾನಿ ಮೋದಿ ಅವರಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿದರು. ಇದನ್ನೂ ಓದಿ: ಎಸಿ ಇರುವ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಸಲಹೆ : ಸುಧಾಕರ್‌

ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ (Nareddra Modi), ಅಗತ್ಯ ಜೀವರಕ್ಷಕ ಔಷಧಗಳ ಲಭ್ಯತೆ ಮೇಲೆ ಕಣ್ಣಿಡಬೇಕು. ಆಸ್ಪತ್ರೆಗಳಲ್ಲಿ ಆಕ್ಸಿಜನ್, ವೆಂಟಿಲೇಟರ್ ಹಾಗೂ ಅಗತ್ಯ ಪ್ರಮಾಣದ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಸೂಕ್ತ ಭದ್ರತೆ ವಹಿಸಬೇಕು ಹಾಗೂ ವೃದ್ಧರ ಮೇಲೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.

ಭಾರತದಲ್ಲಿ ನಾಲ್ಕು ಕೇಸ್: ಈಗಾಗಲೇ ಭಾರತದಲ್ಲಿ ಓಮಿಕ್ರಾನ್ ಬಿಎಫ್.7 ಉಪ ರೂಪಾಂತರಿ ಕೊರೊನಾ ವೈರಸ್‌ನ 4 ಪ್ರಕರಣಗಳು ಪತ್ತೆಯಾಗಿವೆ. ಗುಜರಾತ್ ಹಾಗೂ ಒಡಿಶಾಗಳಲ್ಲಿ ತಲಾ ಎರಡು ಪ್ರಕರಣಗಳು ಪತ್ತೆಯಾಗಿವೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *