-ಸಾಲಮನ್ನಾ ಮಾಡ್ತೀವಿ ಅಂತಾ ಸುಳ್ಳು ಹೇಳ್ತಾರೆ
ಬೆಂಗಳೂರು: ಹುಬ್ಬಳ್ಳಿಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರು.
ಚುನಾವಣೆಗೆ ಮುನ್ನ ರೈತರ ಸಂಪೂರ್ಣ ಸಾಲಮನ್ನಾ ಮಾಡುತ್ತೇವೆ ಎಂದು ಹೇಳುತ್ತಾರೆ. ಅಧಿಕಾರಕ್ಕೆ ಬಂದಾಗ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಿಲ್ಲ. ಎಚ್.ಡಿ.ಕುಮಾರಸ್ವಾಮಿ ಅತ್ಯಂತ ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ. ಕರ್ನಾಟಕದಲ್ಲಿ ದುರ್ಬಲ ಸರ್ಕಾರವನ್ನು ಕೇಂದ್ರದಲ್ಲಿ ಜಾರಿಗೊಳಿಸುವ ಪ್ರಯತ್ನವನ್ನ ಕೆಲವರು ಮಾಡುತ್ತಿದ್ದಾರೆ. ರಾಜ್ಯದ ದೋಸ್ತಿ ಸರ್ಕಾರದಲ್ಲಿ ಹಕ್ಕಿಗಾಗಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಯಾಕಾದ್ರೂ ಸಿಎಂ ಆಗಿದ್ದೇನೆ ಪ್ರತಿನಿತ್ಯ ಕಣ್ಣೀರು ಹಾಕುತ್ತಿದ್ದಾರೆಂದು ಎಂದು ಸಮ್ಮಿಶ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
Advertisement
ಪಂಚಿಂಗ್ ಬ್ಯಾಗ್:
ರಾಜ್ಯ ಸರ್ಕಾರದ ನೇತಾರ ಯಾರು ಎಂಬುವುದು ಜನರಿಗೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಕಿರುಕುಳದಿಂದ ಕುಮಾರಸ್ವಾಮಿ ಪಂಚಿಂಗ್ ಬ್ಯಾಗ್ ಆಗಿದ್ದಾರೆಂದು ವ್ಯಂಗ್ಯ ಮಾತುಗಳಿಂದ ಸಮ್ಮಿಶ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು. ಮಹಾಘಟ್‍ಬಂಧನ್ ಮೂಲಕ ರಾಜ್ಯದಲ್ಲಿ ನೀವು ಕಾಣುತ್ತಿರುವ ದುರ್ಬಲ ಸರ್ಕಾರವನ್ನು ಕೇಂದ್ರದಲ್ಲಿ ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ನಿಮ್ಮ ಒಂದು ಮತ ದೇಶದ ಅಭಿವೃದ್ಧಿಯನ್ನು ನಿರ್ಧರಿಸುತ್ತದೆ. ನಮ್ಮ ಸರ್ಕಾರ ಬಂದ ಮೇಲೆ ದೊಡ್ಡ ದೊಡ್ಡ ವ್ಯಕ್ತಿಗಳು ವಿಚಾರಣೆಗೆ ಹಾಜರಾಗುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಬರ್ಟ್ ವಾದ್ರಾ ಪ್ರಕರಣದ ಮೂಲಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
Advertisement
PM Narendra Modi in Hubli, Karnataka: Vikas ki paanchdhara – Bachhon ko padhai, yuvaon ko kamai, buzurgon ko dawai, kisan ko sinchai aur jan jan ki sunwai, isi vision par sarkar aagae badh rahi hai. pic.twitter.com/KUzAbfDkAb
— ANI (@ANI) February 10, 2019
Advertisement
ನಮ್ಮ ಸರ್ಕಾರದ 55 ತಿಂಗಳಲ್ಲಿ 15 ಲಕ್ಷಗಳಷ್ಟು ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಕೆಳ ವರ್ಗದ ಜನತೆಗೆ ಮಾತ್ರ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಮಧ್ಯಮ ವರ್ಗದ ಜನತೆಗಾಗಿ ಮನೆಗಳನ್ನು ನೀಡುತ್ತಿದ್ದೇವೆ. ಮಧ್ಯಮ ವರ್ಗದ ಜನರಿಗಾಗಿ ವಿಶೇಷ ತೆರಿಗೆ ರಿಯಾಯ್ತಿಗಳನ್ನು ಬಜೆಟ್ ನಲ್ಲಿ ನೀಡಲಾಗಿದೆ. ಈ ಹಿಂದೆ 40 ವರ್ಷದಲ್ಲಿ ಕೇವಲ 8 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಧ್ಯೇಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದೇವೆ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv