– ಭಾರತದ ಕನಸುಗಳನ್ನು ನನಸಾಗಿಸಲು Gen Z ನೆರವಾಗಲಿದೆ; ಮೋದಿ ಭಾಷಣ
– ನನಗೆ ದೇಶದ ಯುವಜನರ ಮೇಲೆ ನಂಬಿಕೆಯಿದೆ
ನವದೆಹಲಿ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ (PM Modi), ಝೆನ್-ಜೀಗಳಿಗೆ ಬಂಬಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ಬರುವ ವರ್ಷದಲ್ಲಿ 1 ಕೋಟಿ ಯುವಕರಿಗೆ ಕೃತಕ ಬುದ್ಧಿಮತ್ತೆ (AI) ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

🚀 ಯುವ ಭಾರತದ ಭವಿಷ್ಯಕ್ಕೆ AI ಶಕ್ತಿ! 🇮🇳
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ದೇಶದ ಯುವಜನತೆಗೆ ಬಂಪರ್ ಘೋಷಣೆ ಮಾಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಬರುವ ವರ್ಷದಲ್ಲಿ ಒಂದು ಕೋಟಿ ಯುವಕರಿಗೆ ಕೃತಕ ಬುದ್ಧಿಮತ್ತೆ (AI) ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಘೋಷಿಸಿದ್ದಾರೆ.
ಇದು ಕೇವಲ ತರಬೇತಿಯಲ್ಲ…
👉… pic.twitter.com/kLvASiwNrP— BJP Karnataka (@BJP4Karnataka) August 15, 2026
ಅಲ್ಲದೇ ಭಾರತದ (India) ಅಭಿವೃದ್ಧಿಯ ಪಯಣದಲ್ಲಿ ಯುವಜನರನ್ನು ಕೇಂದ್ರಬಿಂದುವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಯುವ ಪೀಳಿಗೆಯ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ. ಯುವಶಕ್ತಿ, ಮಹಿಳೆಯರು, ರೈತರು ಹಾಗೂ ಕಾರ್ಮಿಕರ ಸಹಕಾರದೊಂದಿಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಬಹುದು. ಭಾರತದ ಕನಸುಗಳನ್ನು ನನಸಾಗಿಸಲು Gen Z ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಪರಾವಲಂಬನೆಯಿಂದ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಇಡುತ್ತಿದೆ.
ವಿಶೇಷವಾಗಿ ರಕ್ಷಣಾ ಕ್ಷೇತ್ರದಲ್ಲಿ ದೇಶೀಯ ಉತ್ಪಾದನೆಗೆ ಆದ್ಯತೆ ನೀಡುವ ಮೂಲಕ, ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ಪರಿಚಯಿಸಲಾಗಿದೆ. ಇಂದು ‘ಮೇಡ್ ಇನ್ ಇಂಡಿಯಾ’ ರಕ್ಷಣಾ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ… pic.twitter.com/gd2yB8VFrx— BJP Karnataka (@BJP4Karnataka) August 15, 2026
ದೇಶದ ಅಭಿವೃದ್ಧಿಯ ವೇಗವನ್ನು ಮತ್ತಷ್ಟು ಹೆಚ್ಚಿಸಲು ಸುಧಾರಣೆಗಳ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಅಗತ್ಯವಿದೆ. ನನ್ನ ದೇಶದ ಯುವಜನರ ಮೇಲೆ, ನನ್ನ ದೇಶದ ತಾಯಂದಿರು ಮತ್ತು ಸಹೋದರಿಯರ ಮೇಲೆ, ನನ್ನ ದೇಶದ ರೈತರ (Farmers) ಮೇಲೆ ಹಾಗೂ ನನ್ನ ದೇಶದ ಕಾರ್ಮಿಕರ ಮೇಲೆ ನನಗೆ ನಂಬಿಕೆಯಿದೆ. ನಾವೆಲ್ಲರೂ ಸೇರಿ ಈ ಕನಸನ್ನು ನನಸಾಗಿಸಬಹುದು ಎಂದು ಪ್ರಧಾನಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಷ್ಟ್ರಗೀತೆ ‘ವಂದೇ ಮಾತರಂ’ 150 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಗಮನ ಸೆಳೆಯಿತು. ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ‘ವಂದೇ ಮಾತರಂ’ ಗೀತೆಯನ್ನು ಪ್ರಸ್ತುತಪಡಿಸಲಾಯಿತು.
ದೇಶವು ಸ್ವಾತಂತ್ರ್ಯಗೊಂಡ ನಂತರ ಇದೇ ಮೊದಲ ಬಾರಿಗೆ ನವದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಮೊಳಗಿದ “ವಂದೇ ಮಾತರಂ”.#80thIndependenceDay #IndiaIndependenceDay pic.twitter.com/X9J3XDapsg
— BJP Karnataka (@BJP4Karnataka) August 15, 2026
ಧ್ವಜಾರೋಹಣದ ಬಳಿಕ ಸೇನಾ ಬ್ಯಾಂಡ್ ‘ವಂದೇ ಮಾತರಂ’ ಗೀತೆಯನ್ನು ನುಡಿಸಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರೂ ಗೀತೆಯನ್ನು ಹಾಡಿದರು. ಬಳಿಕ ರಾಷ್ಟ್ರಗೀತೆ ಮೊಳಗಿತು.
ಈ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಭಾಗವಹಿಸಿದ್ದರು. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಒಟ್ಟು 2,500 ಬಾಲಕ ಮತ್ತು ಬಾಲಕಿಯರ ಕ್ಯಾಡೆಟ್‌ಗಳು, ‘ಮೈ ಭಾರತ್’ ಸ್ವಯಂಸೇವಕರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅವರು ಜ್ಞಾನಪಥದಲ್ಲಿ ಕುಳಿತು ‘ವಂದೇ ಮಾತರಂ’ ಎಂಬ ಪದದ ಆಕಾರವನ್ನು ರೂಪಿಸುವ ಮೂಲಕ ಗಮನ ಸೆಳೆದರು.
