ಭೋಪಾಲ್: ಸೋಮವಾರ (ಫೆ.24) ಭೋಪಾಲ್‌ನಲ್ಲಿ (Bhopal) ಆರಂಭವಾದ ಇನ್ವೆಸ್ಟ್ ಮಧ್ಯಪ್ರದೇಶ – ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು (Madhya Pradesh Global Investors Summit-2025) ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅವರು ಸುಮಾರು 15 ನಿಮಿಷ ತಡವಾಗಿ ಆಗಮಿಸಿದ್ದಾರೆ.
ಈ ವಿಚಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ, ಇಲ್ಲಿಗೆ ಬರಲು ತಡವಾಗಿದ್ದಕ್ಕಾಗಿ ನಿಮ್ಮೆಲ್ಲರಲ್ಲೂ ನಾನು ಕ್ಷಮೆಯಾಚಿಸುತ್ತೇನೆ. ನಾನು ಇಲ್ಲಿಗೆ ತಲುಪಿದಾಗ, ಇಂದು 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂಬ ವಿಷಯ ನನ್ನ ಗಮನಕ್ಕೆ ಬಂದಿತ್ತು. ಆ ಸಮಯದಲ್ಲಿ ನಾನು ಹೊರಟರೆ ಭದ್ರತಾ ಕಾರಣಗಳಿಗಾಗಿ ರಸ್ತೆಗಳನ್ನು ಮುಚ್ಚಬಹುದು ಮತ್ತು ಮಕ್ಕಳು ಪರೀಕ್ಷೆಗಳಿಗೆ ಹೋಗಲು ತೊಂದರೆಯಾಗುತ್ತದೆ ಅದಕ್ಕೆ ನನ್ನ ವೇಳಾಪಟ್ಟಿಯನ್ನು ಬದಲಾಯಿಸಿಕೊಂಡೆ ಎಂದಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವರದಿ ಸಲ್ಲಿಕೆ | 7 ಪಾಲಿಕೆ ರಚಿಸಲು ಶಿಫಾರಸು – ವರದಿಯಲ್ಲಿ ಏನಿದೆ?
ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು ಮತ್ತು ಅವರು ತಮ್ಮ ಪರೀಕ್ಷಾ ಕೇಂದ್ರವನ್ನು ಸಮಯಕ್ಕೆ ಸರಿಯಾಗಿ ತಲುಪಬೇಕು. ಅದಕ್ಕಾಗಿಯೇ ನಾನು 10 ರಿಂದ 15 ನಿಮಿಷಗಳ ಕಾಲ ವಿಳಂಬ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ವಿದ್ಯಾರ್ಥಿಗಳ ಬಗ್ಗೆ ಪ್ರಧಾನಿಯವರ ಕಾಳಜಿಯನ್ನು ಶ್ಲಾಘಿಸಿದ್ದಾರೆ. ಅವರು ಯಾವಾಗಲೂ ವಿದ್ಯಾರ್ಥಿಗಳು ಮತ್ತು ಅವರ ಉಜ್ವಲ ಭವಿಷ್ಯದ ಬಗ್ಗೆ ಸೂಕ್ಷ್ಮವಾಗಿ ಯೋಚಿಸುತ್ತಾರೆ. ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೋದಿ ವಿದ್ಯಾರ್ಥಿಗಳಿಗೆ ದೈರ್ಯ ತುಂಬುತ್ತಾರೆ ಎಂದು ಹೇಳಿದ್ದಾರೆ.
ಮೋದಿಯವರ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮತ್ತು ಪರೀಕ್ಷಾ ಒತ್ತಡವನ್ನು ನಿಭಾಯಿಸಲು ಸಹಾಯ ಮಾಡಲು ಮೋದಿ ಅವರ ಉಪಕ್ರಮವಾಗಿದೆ. ಇದನ್ನೂ ಓದಿ: ಫೆ.27ರಿಂದ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ: ಯು.ಟಿ.ಖಾದರ್