ನವದೆಹಲಿ: ಭಾರತೀಯ ಕ್ರೀಡಾಪಟುಗಳು ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಅಪ್ರತಿಮ ಸಾಧನೆ ತೋರಿರುವುದನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಭಾರತದ ಕ್ರೀಡಾ ಇತಿಹಾಸದಲ್ಲಿಯೇ ಈ ಕ್ರೀಡಾಕೂಟ ವಿಶೇಷ ಸ್ಥಾನ ಪಡೆಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Advertisement
ಇದೇ ವೇಳೆ ಜಪಾನ್ ಸರ್ಕಾರದ ಆತಿಥ್ಯವನ್ನೂ ಮೋದಿ ಪ್ರಶಂಸಿಸಿದ್ದು, ಕ್ರೀಡಾಕೂಟದಲ್ಲಿ ಒಟ್ಟು 19 ಪದಕಗಳನ್ನು ಗೆದ್ದುಕೊಂಡ ಭಾರತ, ಪದಕ ಪಟ್ಟಿಯಲ್ಲಿ 24ನೇ ಸ್ಥಾನ ಪಡೆದುಕೊಂಡಿದೆ. ಈ ಸಾಧನೆಗೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳನ್ನು ಮೋದಿ ಶ್ಲಾಘಿಸಿದ್ದಾರೆ. ಇದುವರೆಗಿನ ಇತಿಹಾಸದಲ್ಲಿ ಪದಕ ಪಟ್ಟಿಯಲ್ಲಿ ಭಾರತ ಪಡೆದ ಅತ್ಯಧಿಕ ಸ್ಥಾನ ಇದಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ
Advertisement
In the history of Indian sports, the Tokyo #Paralympics will always have a special place. The games will remain etched in the memory of every Indian and will motivate generations of athletes to pursue sports. Every member of our contingent is a champion and source of inspiration.
— Narendra Modi (@narendramodi) September 5, 2021
Advertisement
5 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಭಾರತ ಈ ಬಾರಿ ಗೆದ್ದುಕೊಂಡಿದೆ. ಕ್ರೀಡಾಪಟುಗಳ ತರಬೇತುದಾರರು ಹಾಗೂ ಅವರ ಕುಟುಂಬಸ್ಥರಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ
Advertisement