Latest

ಟೋಕಿಯೋ ಪ್ಯಾರಾಲಂಪಿಕ್ಸ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿಶೇಷ: ಮೋದಿ

Published

on

narendra modi
Share this

ನವದೆಹಲಿ: ಭಾರತೀಯ ಕ್ರೀಡಾಪಟುಗಳು ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಅಪ್ರತಿಮ ಸಾಧನೆ ತೋರಿರುವುದನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಭಾರತದ ಕ್ರೀಡಾ ಇತಿಹಾಸದಲ್ಲಿಯೇ ಈ ಕ್ರೀಡಾಕೂಟ ವಿಶೇಷ ಸ್ಥಾನ ಪಡೆಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಜಪಾನ್ ಸರ್ಕಾರದ ಆತಿಥ್ಯವನ್ನೂ ಮೋದಿ ಪ್ರಶಂಸಿಸಿದ್ದು, ಕ್ರೀಡಾಕೂಟದಲ್ಲಿ ಒಟ್ಟು 19 ಪದಕಗಳನ್ನು ಗೆದ್ದುಕೊಂಡ ಭಾರತ, ಪದಕ ಪಟ್ಟಿಯಲ್ಲಿ 24ನೇ ಸ್ಥಾನ ಪಡೆದುಕೊಂಡಿದೆ. ಈ ಸಾಧನೆಗೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳನ್ನು ಮೋದಿ ಶ್ಲಾಘಿಸಿದ್ದಾರೆ. ಇದುವರೆಗಿನ ಇತಿಹಾಸದಲ್ಲಿ ಪದಕ ಪಟ್ಟಿಯಲ್ಲಿ ಭಾರತ ಪಡೆದ ಅತ್ಯಧಿಕ ಸ್ಥಾನ ಇದಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

5 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಭಾರತ ಈ ಬಾರಿ ಗೆದ್ದುಕೊಂಡಿದೆ. ಕ್ರೀಡಾಪಟುಗಳ ತರಬೇತುದಾರರು ಹಾಗೂ ಅವರ ಕುಟುಂಬಸ್ಥರಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications