ವಾರಣಾಸಿ ಗ್ಯಾಂಗ್ ರೇಪ್ – ಏರ್‌ಪೋರ್ಟಲ್ಲೇ ಪೊಲೀಸರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

Public TV
2 Min Read
Modi 3

ಲಕ್ನೋ: ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ (Narendra Modi) ಅವರು ವಾರಣಾಸಿ ಏರ್‌ಪೋರ್ಟ್‌ನಲ್ಲೇ ಇತ್ತೀಚೆಗೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ (Varanasi Gang Rape Case) ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

Modi 2 1

19 ವರ್ಷದ ಯುವತಿಯನ್ನ ಅಪಹರಿಸಿ 23 ಮಂದಿ 1 ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಸಂಬಂಧ ವಾರಣಾಸಿಯ ಪೊಲೀಸ್ ಆಯುಕ್ತರು (Varanasi Police Commissioner), ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ವಾರಣಾಸಿ ಏರ್‌ಪೋರ್ಟ್‌ನಲ್ಲೇ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: 19ರ ಯುವತಿಯ ಕಿಡ್ನ್ಯಾಪ್‌ – 22 ಮಂದಿ ಕಾಮುಕರಿಂದ ದಿನವಿಡೀ ಗ್ಯಾಂಗ್‌ ರೇಪ್‌

Stop Rape Crime 2

ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಾಲ್‌ಪುರ ಪಾಂಡೆಪುರ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏ.11ರಂದು ವಾರಣಾಸಿಗೆ ಮೋದಿ ಭೇಟಿ – 3,884 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ

Crime 1

ಏನಿದು ಘಟನೆ?
ಉತ್ತರ ವಾರಣಾಸಿಯ ಲಾಲ್‌ಪುರ್‌ ಪ್ರದೇಶದ ನಿವಾಸಿಯಾಗಿದ್ದ ಸಂತ್ತಸ್ತ ಯುವತಿ ಕಳೆದ ಮಾರ್ಚ್‌ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದ್ರೆ ಅದೊಂದು ದಿನ (ಮಾ.29) ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ಅದೇ ದಿನ ಕಿಡ್ನ್ಯಾಪ್‌ ಮಾಡಿದ್ದ ಕಾಮುಕರು ಆಕೆಗೆ ಡ್ರಗ್ಸ್‌ ನೀಡಿ ಕಳುಹಿಸಿದ್ದರು. ಬಳಿಕ ತನ್ನ ಸ್ನೇಹಿತೆಯನ್ನು ಭೇಟಿಯಾದ ಸಂತ್ರಸ್ತೆ ಮೆನೆಗೆ ಬಂದು ಪೋಷಕರ ಬಳಿ ತನಗಾದ ಅನ್ಯಾಯದ ಬಗ್ಗೆ ತಿಳಿಸಿದ್ದಳು. ಬಳಿಕ ಪೋಷಕರು ಪೊಲೀಸರಿಗೆ ಏಪ್ರಿಲ್‌ 6ರಂದು ದೂರು ನೀಡಿದ್ದರು. ದೂರಿನಲ್ಲಿ ತನ್ನ ಮೇಲೆ ಒಂದು ವಾರಗಳ ಕಾಲ 23 ಜನ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಳು.

ಘಟನೆ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಇದನ್ನೂ ಓದಿ: ಶಾಸಕ ಯತ್ನಾಳ್‌ ಕೊಲೆಗೆ ಸಂಚು? – ಅನ್ಯಕೋಮಿನ ಯುವಕನ ಸ್ಫೋಟಕ ಆಡಿಯೋ ವೈರಲ್‌

Share This Article