ನವದೆಹಲಿ: ನಾವು ಚೀನಾದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಪಿಸುತ್ತಿದ್ದಾರೆ. ಭಾರತೀಯ ಸೇನೆಯನ್ನು ಎಲ್‌ಎಸಿಗೆ (LAC) ಕಳುಹಿಸಿದ್ದು ಯಾರು? ರಾಹುಲ್ ಗಾಂಧಿಯಲ್ಲ (Rahul Gandhi), ನರೇಂದ್ರ ಮೋದಿ (Narendra Modi) ಸೇನೆಯನ್ನು ಕಳುಹಿಸಿದ್ದಾರೆ ಎಂದು ಜೈಶಂಕರ್ (Jaishankar) ಟಾಂಗ್ ಕೊಟ್ಟಿದ್ದಾರೆ.
ನಮ್ಮ ಸರ್ಕಾರದಲ್ಲಿ ಗಡಿಯಲ್ಲಿನ ಮೂಲಸೌಕರ್ಯ ವೆಚ್ಚವನ್ನು ಐದು ಬಾರಿ ಹೆಚ್ಚಿಸಿದ್ದೇವೆ. ಈಗ ಹೇಳಿ, ರಕ್ಷಣಾತ್ಮಕ ಮತ್ತು ಹೊಂದಾಣಿಕೆಯ ವ್ಯಕ್ತಿ ಯಾರು? ನಿಜವಾಗಿ ಯಾರು ಸತ್ಯವನ್ನು ಹೇಳುತ್ತಿದ್ದಾರೆ? ಯಾರು ವಿಷಯಗಳನ್ನು ನಿಖರವಾಗಿ ವ್ಯಕ್ತಪಡಿಸುತ್ತಿದ್ದಾರೆ? ಯಾರು ಇತಿಹಾಸದೊಂದಿಗೆ ಕಾಲೆಳೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಜೈಶಂಕರ್ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮತಗಳ ಓಲೈಕೆಗೆ ಮುಂದಾದ ಹೈಕಮಾಂಡ್ – ರಾಜ್ಯ ಬಿಜೆಪಿ ನಾಯಕರಿಗೆ ಹೊಸ ಸವಾಲು
Advertisement
Advertisement
ಕಳೆದ ವರ್ಷ ಪ್ಯಾಂಗೊಂಗ್ ಲೇಕ್ ಪ್ರದೇಶದಲ್ಲಿ ಸೇತುವೆ ನಿರ್ಮಿಸಿರುವ ಚೀನಾ ವಿಚಾರವಾಗಿ ಕೇಂದ್ರವನ್ನು ಗುರಿಯಾಗಿಸಿ ಟೀಕಿಸಿದ್ದ ವಿಪಕ್ಷಗಳನ್ನು ಜೈಶಂಕರ್ ತರಾಟೆಗೆ ತೆಗೆದುಕೊಂಡರು. 1962 ರ ಯುದ್ಧದ ನಂತರ ಈ ಪ್ರದೇಶವು ಚೀನಾ ವಶಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.
Advertisement
ಆ ಪ್ರದೇಶವು ಯಾವಾಗ ಚೀನಾದ (China) ನಿಯಂತ್ರಣಕ್ಕೆ ಬಂತು? 1958ರಲ್ಲಿ ಚೀನಿಯರು ಮೊದಲು ಅಲ್ಲಿಗೆ ಬಂದರು. 1962ರ ಅಕ್ಟೋಬರ್‌ನಲ್ಲಿ ಚೀನೀಯರು ಅದನ್ನು ವಶಪಡಿಸಿಕೊಂಡರು. ಆ ವಿಚಾರವನ್ನಿಟ್ಟುಕೊಂಡು ಈಗ ನೀವು 2023ರಲ್ಲಿ ಮೋದಿ ಸರ್ಕಾರವನ್ನು ದೂಷಿಸಲು ಹೊರಟಿದ್ದೀರಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: UPI-PayNow ಲಿಂಕ್ – ಇನ್ನು ಮುಂದೆ ಸಿಂಗಾಪುರದಿಂದ ಸುಲಭವಾಗಿ ಭಾರತಕ್ಕೆ ಹಣ ಕಳುಹಿಸಿ
Advertisement
ರಾಜೀವ್ ಗಾಂಧಿ ಅವರು 1988 ರಲ್ಲಿ ಬೀಜಿಂಗ್‌ಗೆ ಹೋಗಿದ್ದರು. 1993 ಮತ್ತು 1996ರಲ್ಲಿ ಒಪ್ಪಂದಗಳಿಗೆ ಸಹಿ ಹಾಕಿದರು. ಆ ಒಪ್ಪಂದಗಳಿಗೆ ಸಹಿ ಹಾಕುವುದು ತಪ್ಪು ಎಂದು ನಾನು ಭಾವಿಸುವುದಿಲ್ಲ. ಇದು ರಾಜಕೀಯ ವಿಚಾರವಲ್ಲ. ಗಡಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆ ಸಮಯದಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k