ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ, ಖರ್ಗೆ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ದೂರ ವಾಣಿ ಕರೆ ಮಾಡಿ ಮೋದಿ (PM Modi) ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮೋದಿ ವಿರುದ್ಧ ಗುಡುಗಿದ್ದ ಕೈನಾಯಕ:
ಜಮ್ಮು ಮತ್ತು ಕಾಶ್ಮೀರದ ಅಂತಿಮ ಹಂತದ ಚುನಾವಣಾ ಪ್ರಚಾರ (Jammu and Kashmir public rally ಸಭೆಯಲ್ಲಿ ಭಾನುವಾರ ಮಾತನಾಡುವ ಖರ್ಗೆ ಅವರು ಅಸ್ವಸ್ಥರಾದರು. ತಕ್ಷಣ ಸುತ್ತುವರಿದ ಪಕ್ಷದ ಮುಖಂಡರು ಅವರನ್ನು ಕುರ್ಚಯಲ್ಲಿ ಕೂರಿಸಿದರು. ಕೆಲ ನಿಮಿಷಗಳ ನಂತರ, ಮತ್ತೆ ವೇದಿಕೆಗೆ ಬಂದ ಖರ್ಗೆ (Mallikarjun Kharge) ಅವರು ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು.
Advertisement
Advertisement
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ ಈಗ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನ ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಗುಡುಗಿದ್ದರು.
Advertisement
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮನಸ್ಸು ಮಾಡಿದ್ದರೆ ಒಂದೆರಡು ವರ್ಷಗಳ ಹಿಂದೆಯೇ ಚುನಾವಣೆ ಮಾಡಬಹುದಿತ್ತು. ಆದ್ರೆ ಬಿಜೆಪಿಗರು ಎಂದಿಗೂ ಚುನಾವಣೆ ನಡೆಸಲು ಬಯಸುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಆರಂಭಿಸಿದರು. ಬಿಜೆಪಿಗರು ರಾಜ್ಯಪಾಲರದ ಮೂಲಕ ರಿಮೋಟ್-ನಿಯಂತ್ರಿತ ಸರ್ಕಾರವನ್ನು ನಡೆಸಲು ಬಯಸಿದ್ದರು. ಪ್ರಧಾನಿ ಮೋದಿ ಕಳೆದ 10 ವರ್ಷಗಳಲ್ಲಿ ಭಾರತದ ಯುವಕರಿಗೆ ಏನನ್ನೂ ನೀಡಿಲ್ಲ. 10 ವರ್ಷಗಳಲ್ಲಿ ನಿಮ್ಮ ಸಮೃದ್ಧಿಯನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿಯನ್ನು ನೀವು ನಂಬಬಹುದೇ? ಯಾವುದೇ ಬಿಜೆಪಿ ನಾಯಕರು ನಿಮ್ಮ ಮುಂದೆ ಬಂದರೆ, ಅವರು ಪ್ರಗತಿ ತಂದಿದ್ದಾರೋ ಇಲ್ಲವೋ ಕೇಳಿ ಎಂದು ಕರೆ ನೀಡಿದ್ದರು.