ನವದೆಹಲಿ: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ತಕ್ಷಣ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಮನವಿ ಮಾಡಿದ್ದಾರೆ.
Advertisement
ಉಕ್ರೇನ್ ವಿರುದ್ಧ ಯುದ್ಧ ಆರಂಭವಾಗುತ್ತಿದ್ದಂತೆ ಭಾರತದ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂಬ ಮಾತು ಎಲ್ಲೆಡೆಯಿಂದ ಕೇಳಿಬರುತ್ತಿತ್ತು. ಇದೀಗ ಮೋದಿ, ಪುಟಿನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಯುದ್ಧ ನಿಲ್ಲಿಸಿ ಎಂದು ಮನವಿ ಮಾಡಿ ಉಕ್ರೇನ್‍ನ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
Advertisement
Advertisement
ಪುಟಿನ್ ಜೊತೆ ಸುಮಾರು 25 ನಿಮಿಷಗಳ ಮಾತುಕತೆ ನಡೆಸಿದ ಮೋದಿ, ಯುದ್ಧದಿಂದಾಗಿ ಉಕ್ರೇನ್‍ನಲ್ಲಿರುವ ಭಾರತೀಯರ ಬಗ್ಗೆ ವಿಶೇಷವಾಗಿ ಮಾತುಕತೆ ನಡೆಸಿದ್ದು, ಅವರ ಸುರಕ್ಷತೆ ಮುಖ್ಯ ಎಂದಿದ್ದಾರೆ. ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇದ್ದು ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳುವಂತಾಗಬೇಕೆಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾ ಮತ್ತು ನ್ಯಾಟೋ ನಡುವಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಮಾತ್ರ ಪರಿಹರಿಸಬಹುದು ಯುದ್ಧದಿಂದ ಅತಿ ಹೆಚ್ಚು ಹಾನಿಯಾಗಲಿದೆ. ಭಾರತೀಯಯರ ರಕ್ಷಣೆಗೆ ಭಾರತದ ರಾಜತಾಂತ್ರಿಕರು ನಿರಂತರ ಸಂಪರ್ಕ ಹೊಂದಲಿದ್ದಾರೆ ಎಂದು ಮೋದಿಮನವಿ ಮಾಡಿದ್ದು, ಭಾರತದ ಜೊತೆಗೆ ಸಂಪರ್ಕದಲ್ಲಿರುವುದಾಗಿ ಪುಟಿನ್ ಭರವಸೆ ನೀಡಿದರು. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
Advertisement
ಈ ಮೊದಲು ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಅರಂಭಿಸುತ್ತಿದ್ದಂತೆ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು.
ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್‍ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಿ ಎಂದು ಕೇಳಿಕೊಂಡಿದ್ದರು.