LatestLeading NewsMain PostNational

ಗಣರಾಜ್ಯೋತ್ಸವ ಸಂಭ್ರಮ: ಮೋದಿ ಟೋಪಿ, ಶಾಲು ವಿಶೇಷತೆ ಏನು?

ನವದೆಹಲಿ: 73ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ರಾಜ್‍ಪಥ್‍ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು.

ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬುಧವಾರದಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ ಅವರು ಉತ್ತರ ಖಂಡದ ರಾಷ್ಟ್ರೀಯ ಹೂವು ಬ್ರಹ್ಮಕಮಲದೊಂದಿಗೆ ಉತ್ತರಾಖಂಡದ ಟೋಪಿಯನ್ನು ಧರಿಸಿದ್ದಾರೆ. ಜೊತೆಗೆ ಮಣಿಪುರದ ಶಾಲು ಧರಿಸಿರುವುದು ವಿಶೇಷವಾಗಿದೆ. ಮೋದಿ ಅವರ ಉಡುಗೆಯು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಟ್ರೇಂಡಿಂಗ್‍ನ್ನು ಸೃಷ್ಟಿಸಿದೆ.

ಪ್ರಧಾನಿ ಮೋದಿಯವರು ಬ್ರಹ್ಮಕಮಲವನ್ನು ತುಂಬಾ ಇಷ್ಟಪಡುತ್ತಾರೆ. ಕೇದಾರನಾಥದಲ್ಲಿ ಪೂಜೆ ಮಾಡಿದಾಗಲೆಲ್ಲಾ ಈ ಹೂವನ್ನು ಬಳಸುತ್ತಾರೆ. ಕುತೂಹಲಕಾರಿ ವಿಷಯವೆಂದರೆ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಿಗೆ ಪ್ರಧಾನಿಯವರ ಉಡುಗೆಯು ಸಂಬಂಧಿಸಿವೆ.

ಕಳೆದ ವರ್ಷ, ಪ್ರಧಾನಿ ಮೋದಿ ಅವರು ಈ ದಿನದಂದು ಜಾಮ್‍ನಗರ ರಾಜಮನೆತನದಿಂದ ಉಡುಗೊರೆ ಯಾಗಿ ನೀಡಲಾದ ವರ್ಣರಂಜಿತ ಹಲಾರಿ ಪಾಗ್ (ರಾಜ ತಲೆಯ ಪೇಟ) ಧರಿಸಿದ್ದರು. ಇದನ್ನೂ ಓದಿ: ಕೊರೊನಾ ನಿಯಂತ್ರಣದಲ್ಲಿ ಸರ್ಕಾರದಿಂದ ಅತ್ಯುತ್ತಮ ಸಾಧನೆ: ಗೆಹ್ಲೋಟ್

73ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಮುನ್ನ ಪ್ರಧಾನಿ ಮೋದಿ ಅವರು ಹೊಸದಾಗಿ ನಿರ್ಮಿಸಲಾದ ರಾಷ್ಟ್ರೀಯ ಯುದ್ಧ ಸ್ಮಾರಕನಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಜೈ ಹಿಂದ್ – ಗಣರಾಜ್ಯೋತ್ಸವಕ್ಕೆ ಶುಭಕೋರಿದ ಪ್ರಧಾನಿ ಮೋದಿ

ಈ ಬಾರಿ ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವದ ಪರೇಡ್‍ನಲ್ಲಿ 16 ಕವಾಯತು ತಂಡಗಳು, 17 ಮಿಲಿಟರಿ ಬ್ಯಾಂಡ್‍ಗಳು ಮತ್ತು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ವಿವಿಧ ಇಲಾಖೆಗಳು ಹಾಗೂ ಸಶಸ್ತ್ರ ಪಡೆಗಳ 25 ಸ್ಥಬ್ಧಚಿತ್ರಗಳನ್ನು ಪ್ರದರ್ಶಿಸಿದೆ. ಭಾರತದ ಸೇನೆ ಶಕ್ತಿ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಾರಂಭಗೊಂಡಿದೆ.

ಕೋವಿಡ್ ಭೀತಿಯಿಂದ, ದೆಹಲಿ ಪೊಲೀಸರು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಹಾಗೂ ಎರಡೂ ಡೋಸ್‍ಗಳ ಲಸಿಕೆ ಪಡೆಯದ ಜನರಿಗೆ ಈ ವರ್ಷದ ಗಣರಾಜ್ಯೋತ್ಸವ ಪರೇಡ್‍ಗೆ ಹಾಜರಾಗಲು ನಿರ್ಬಂಧಿಸಿದ್ದಾರೆ.

Leave a Reply

Your email address will not be published.

Back to top button