ICRISAT ಕ್ಯಾಂಪಸ್ ತೋಟದಲ್ಲಿ ಕಡಲೆ ಕಾಯಿ ಸವಿದ ಪ್ರಧಾನಿ ಮೋದಿ

Public TV
2 Min Read
MODI 2

ಹೈದರಾಬಾದ್: ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆ (International Crops Research Institute for Semi-Arid Tropics) (ICRISAT)ಯ 50ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿ ಮೋದಿ, ಕಾರ್ಯಕ್ರಮದ ಬಳಿಕ ಕ್ಯಾಂಪಸ್ ತೋಟದಲ್ಲಿ ಬೆಳೆದಿದ್ದ ಕಡಲೆ ಗಿಡದಿಂದ ಕಡಲೆ ಬೀಜ ಕಿತ್ತು ಸವಿದಿದ್ದಾರೆ.

ಕಾರ್ಯಕ್ರಮದ ನಂತರ ಕ್ಯಾಂಪಸ್ ತೋಟದ ಸುತ್ತ ಹೆಜ್ಜೆ ಹಾಕಿದ್ದಾರೆ. ತೋಟದಲ್ಲಿ ಬೆಳೆದಿದ್ದ ಕಡಲೆ ಕಾಯಿ ಗಿಡದಿಂದ ಕಡಲೆ ಬೀಜ ಕಿತ್ತು ಸವಿದಿದ್ದಾರೆ. ಇದೇ ವೇಳೆ ಕ್ಯಾಂಪಸ್‍ನ ತೋಟದಲ್ಲಿ ಬೆಳೆದಿದ್ದ, ರಾಗಿ,ಜೋಳ ಸೇರಿ ವಿವಿಧ ಬೆಳೆಗಳ ಪರಿಶೀಲನೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆಯೆಂಬುದು ನಮ್ಮ ರೈತರಿಗೆ ಅತ್ಯಂತ ದೊಡ್ಡ ಸವಾಲಾಗಿದೆ. ಕೃಷಿಯಲ್ಲಿ ಮೂಲಭೂತ ವಿಷಯಗಳಿಗೆ ಉತ್ತೇಜನ ನೀಡುವ ಜತೆ, ಭವಿಷ್ಯದೆಡೆಗೆ ಧಾವಿಸುವುದರತ್ತ ನಾವು ಗಮನ ನೆಟ್ಟಿದ್ದೇವೆ. ನಮ್ಮ ಅಗತ್ಯವನ್ನು ದೊಡ್ಡ ಮಟ್ಟದಲ್ಲಿ ಪೂರೈಸುವ ಈ ದೇಶದ ಶೇ.80ರಷ್ಟು ಸಣ್ಣ ರೈತರತ್ತ ನಾವು ಗಮನ ಕೇಂದ್ರೀಕರಿಸಿದ್ದೇವೆ. ಅದರ ಭಾಗವಾಗಿಯೇ ನಮ್ಮ ಕೇಂದ್ರ ಸರ್ಕಾರದ 2022-23ರ ಬಜೆಟ್‍ನಲ್ಲಿ ನೈಸರ್ಗಿಕ ಬೇಸಾಯ ಮತ್ತು ಡಿಜಿಟಲ್ ಕೃಷಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ ಲತಾ ಮಂಗೇಶ್ಕರ್

ಐಸಿಆರ್‌ಐಎಸ್‍ಎಟಿ ಸಂಸ್ಥೆಯು ಕಳೆದ 5 ದಶಕಗಳಿಂದಲೂ ಕೂಡ ಕೃಷಿಯನ್ನು ಸುಲಭ ಮತ್ತು ಸುಸ್ಥಿರಗೊಳಿಸಲು ಇತರ ದೇಶಗಳಿಗೆ ಸಹಾಯ ಮಾಡುತ್ತಿದೆ. ಹಾಗೇ, ಈ ಸಂಸ್ಥೆ ಭಾರತದ ಕೃಷಿ ವಲಯ ಬಲಪಡಿಸುವ ನಿಟ್ಟಿನಲ್ಲಿ ತಮ್ಮ ಸೇವೆಯನ್ನು ಮುಂದುವರಿಸುತ್ತದೆ ಎಂಬ ಭರವಸೆ ನನಗೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

Share This Article
Leave a Comment

Leave a Reply

Your email address will not be published. Required fields are marked *