– ರಾಮೇಶ್ವರಂ ದೇಗುಲದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ
ಚೆನ್ನೈ: ತಮಿಳುನಾಡಿಗೆ (Tamilnadu) 3 ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ರಾಮೇಶ್ವರಂನಲ್ಲಿರುವ ಶ್ರೀ ಅರುಲ್ಮಿಗು ರಾಮನಾಥಸ್ವಾಮಿ ದೇವಸ್ಥಾನಕ್ಕೆ (Sri Arulmigu Ramanathaswamy Temple) ಭೇಟಿ ನೀಡಿ ಪೂಜೆ ಸಲ್ಲಿಸಿದರು.
Prayed at the Arulmigu Ramanathaswamy Temple for the good health and well-being of 140 crore Indians. pic.twitter.com/mfd3yu4kUx
— Narendra Modi (@narendramodi) January 20, 2024
Advertisement
ಮಧ್ಯಾಹ್ನ 2.10ಕ್ಕೆ ಹೆಲಿಕಾಪ್ಟರ್ ಮೂಲಕ ರಾಮೇಶ್ವರಂ (Rameshwaram) ಪಕರುಂಬುವಿನ ಅಮೃತಾನಂದ ಶಾಲಾ ಆವರಣಕ್ಕೆ ಪ್ರಧಾನಿ ಮೋದಿ ಆಗಮಿಸಿದರು. ಅಲ್ಲಿಂದ ಮಧ್ಯಾಹ್ನ 3.10ಕ್ಕೆ ಅಗ್ನಿತೀರ್ಥದಲ್ಲಿ ಪುಣ್ಯಸ್ನಾನ ಮಾಡಿದರು. ನಂತರ ದೇವಸ್ಥಾನದಲ್ಲಿ ನಡೆಯುತ್ತಿದ್ದ ರಾಮಾಯಣ ಪಥ ಮತ್ತು ಭಜನಾ ಸಂಧ್ಯಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Advertisement
#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram, Tamil Nadu. The Prime Minister also took a holy dip into the sea here. pic.twitter.com/v7BCSxdnSk
— ANI (@ANI) January 20, 2024
Advertisement
ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya) ನಡೆಯಲಿರುವ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದವರೆಗೆ 11 ದಿನಗಳ ವ್ರತದಲ್ಲಿರುವ ಪ್ರಧಾನಿ ಮೋದಿ ಶನಿವಾರ ತಿರುಚಿರಾಪಳ್ಳಿಗೆ ಆಗಮಿಸಿದರು. ಇದಕ್ಕೂ ಮುನ್ನ ಪ್ರಧಾನಿಯವರು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ ತಮ್ಮ ಭೇಟಿಯ ವೇಳೆ ಮೋದಿ ಅವರು ದೇವಾಲಯದ ಆವರಣದಲ್ಲಿ ‘ಆಂಡಾಳ್’ ಎಂಬ ಆನೆಯ ಬಳಿಯಿಂದ ಆಶೀರ್ವಾದ ಪಡೆದರು.
Advertisement
Listening to verses of the Kamba Ramayan at the Sri Ranganathaswamy Temple is an experience I will cherish for my entire life. The fact that this is the very Temple where the great Kamban first publically presented his Ramayan makes it more noteworthy. pic.twitter.com/4Flcq5FlsH
— Narendra Modi (@narendramodi) January 20, 2024
ಪ್ರಧಾನಿ ಮೋದಿ ಅವರು ಭಾನುವಾರದಂದು ಧನುಷ್ಕೋಡಿಯ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ ನಿಗದಿಯಾಗಿದ್ದು, ಪೂಜೆ ಸಲ್ಲಿಸಲಿದ್ದಾರೆ. ರಾಮಸೇತು ನಿರ್ಮಿಸಿದ ಸ್ಥಳ ಎಂದು ಹೇಳಲಾಗುವ ಅರಿಚಲ್ ಮುನೈಗೂ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ
ಒಟ್ಟಿನಲ್ಲಿ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ಪ್ರಧಾನಿ ಮೋದಿ ಅವರು ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕೇರಳದ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.