ಬೆಂಗಳೂರು: ಬಂಡವಾಳ ಹೂಡಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕೆಲ ಕಂಪನಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೊಸ ಬಾಂಬ್ ಸಿಡಿಸಿದ್ದಾರೆ.
ವಿಕಾಸಸೌಧದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಂಡವಾಳ ಹೂಡಿಕೆಯ (Capital Investment) ವಿಚಾರದಲ್ಲಿ ಪ್ರಧಾನಿ ಮೋದಿ ಕೆಲ ಕಂಪನಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಮೋದಿ ಅವರೇ ಕರೆ ಮಾಡಿ ಗುಜರಾತ್‌ನಲ್ಲಿ (Gujarat) ಹೂಡಿಕೆ ಮಾಡುವಂತೆ ಹೇಳುತ್ತಿದ್ದಾರೆ. ಆ ಕಂಪನಿಗಳು ಯಾವುವು ಅಂತಾ ಗೊತ್ತಿದೆ, ಆದ್ರೆ ಹೆಸರು ಉಲ್ಲೇಖಿಸಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪವಿತ್ರಾಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್
ಮುಂದುವರಿದು, ನಮ್ಮ ರಾಜ್ಯದ ಮಾನವ ಸಂಪನ್ಮೂಲಕ್ಕೆ ಬಹಳ ಬೇಡಿಕೆ ಇದೆ. ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಬೇಡಿಕೆ ಹೆಚ್ಚಿದೆ. ಚೀನಾ, ಯುರೋಪಿಯನ್ ದೇಶಗಳು, ಅಮೆರಿಕ ಕಂಪನಿಗಳ ಜೊತೆಗೆ ನಮ್ಮ ಸ್ಪರ್ಧೆ ಇದೆ. ನವೋದ್ಯಮದಲ್ಲಿ, ನಾವು 9ನೇ ಸ್ಥಾನದಲ್ಲಿದ್ದೇವೆ. ಮುಂದಿನ 4 ವರ್ಷಗಳ ಒಳಗೆ ಟಾಪ್-4ನೇ ಸ್ಥಾನಕ್ಕೆ ತಲುಪುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ; ನಿರ್ಮಾಣ ಕಾರ್ಯದಲ್ಲಿ ಲೋಪ – ಪ್ರಧಾನ ಅರ್ಚಕ ಆರೋಪ
ರಾಜ್ಯಕ್ಕೆ ಬಂಡವಾಳ ಹೂಡಿಕೆ ಬಗ್ಗೆ, ವಿವಿಧ ಕಂಪನಿಗಳ ಜೊತೆ ಚರ್ಚೆ ಮಾಡಲಾಗಿದೆ. ಲಂಡನ್ ಮತ್ತು ಅಮೇರಿಕ ದೇಶಗಳ ಪ್ರವಾಸ ಮಾಡಿ ವಾಪಸ್ ಬಂದಿದ್ದೇವೆ. ಉದ್ಯೋಗ ಸೃಷ್ಟಿ, ಬಂಡವಾಳ ಹರಿದುಬರುವ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೌಶಲ್ಯ ಅಭಿವೃದ್ಧಿ ಬಗ್ಗೆಯೂ ಮಾಡಲಾಗಿದೆ. ಮೈಕ್ರೋ ಸಾಫ್ಟ್ ಜೊತೆ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇವೆ. ಇದರೊಂದಿಗೆ ಮೆಡಿಕಲ್ ಮತ್ತು ಸೆಮಿಕಂಡಕ್ಟರ್ ತಂತ್ರಜ್ಞಾನವನ್ನು ಕರ್ನಾಟಕಕ್ಕೆ ತರುವ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಕರ್ನಾಟಕ ಬಂಡವಾಳ ಹೂಡಿಕೆಗೆ ಪೂರಕವಾದ ರಾಜ್ಯ ಎಂದು ಉದ್ದಿಮೆದಾರರೂ ಒಪ್ಪಿದ್ದಾರೆ. ಹಲವಾರು ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ವಿವರಿಸಿದ್ದಾರೆ.