ಬೆಂಗಳೂರು,ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದು, ದಾವಣಗೆರೆಯಲ್ಲಿ ನಡೆಯುವ ರೈತ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಮೋದಿ ಅವರು ಇಂದು ಸಂಜೆ 4 ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ. ಬಳಿಕ ಸುಮಾರು ಒಂದು ಗಂಟೆ ಕಾಲ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಹುಟ್ಟು ಹಬ್ಬದ ಪ್ರಯುಕ್ತ ಬಿಎಸ್ ಯಡಿಯೂರಪ್ಪರಿಗೆ 4 ಕೆಜಿ ತೂಕದ ತೇಗದ ನೇಗಿಲು ನೀಡಿ ಸನ್ಮಾನ ಮಾಡಲಿದ್ದಾರೆ. ಜೊತೆಗೆ ಮುಷ್ಠಿ ಅಕ್ಕಿ ಅಭಿಯಾನಕ್ಕೂ ಚಾಲನೆ ನೀಡಲಿದ್ದಾರೆ.
Advertisement
Advertisement
ರಾಜ್ಯದ ರೈತರಿಂದ ಮುಷ್ಠಿ ಅಕ್ಕಿ ಸಂಗ್ರಹಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಬಿಜೆಪಿ ನಾಯಕರು ಪ್ರತಿಜ್ಞೆ ಮಾಡಲಿದ್ದು, 15 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ರಾಜ್ಯದ 6028 ಗ್ರಾಮ ಪಂಚಾಯಿತಿಗಳಲ್ಲೂ ಬಿಜೆಪಿ ಕಾರ್ಯಕರ್ತರು ಮುಷ್ಠಿ ಅಕ್ಕಿ ಅಭಿಯಾನ ನಡೆಸಲಿದ್ದಾರೆ.
Advertisement
ಪ್ರಧಾನಿ ಮೋದಿಯ ಇಂದಿನ ಭಾಷಣ ತೀವ್ರ ಕುತೂಹಲ ಕೆರಳಿಸಿದ್ದು, ರೈತರ ಸಮಸ್ಯೆ, ಮಹದಾಯಿ ವಿವಾದ, ರೈತರ ಸಾಲಮನ್ನಾದ ಬಗ್ಗೆ ಮಾತನಾಡ್ತಾರಾ ಎಂದು ಕಾದು ನೋಡಬೇಕಿದೆ. ಇನ್ನು ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾವೇರಿ, ಶಿವಮೊಗ್ಗ, ಬಳ್ಳಾರಿ ಸೇರಿದಂತೆ ಇತರೆ ಜಿಲ್ಲೆಗಳ ರೈತರನ್ನ ದೃಷ್ಟಿಯಲ್ಲಿಟ್ಟುಕೊಂಡು ಮಧ್ಯ ಕರ್ನಾಟಕದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನು ಓದಿ: Commission ಸರ್ಕಾರವನ್ನು ತೊಲಗಿಸಿ Mission ಸರ್ಕಾರವನ್ನು ತನ್ನಿ: ಪ್ರಧಾನಿ ಮೋದಿ
Advertisement
ಪ್ರಧಾನಿ ಮೋದಿ ವೇಳಾಪಟ್ಟಿ
* ಮಧ್ಯಾಹ್ನ 12.30ಕ್ಕೆ ದೆಹಲಿಯ ವಿಮಾನ ನಿಲ್ದಾಣದಿಂದ ಬಿಬಿಜೆ ಏರ್‍ಕ್ರಾಫ್ಟ್‍ನಲ್ಲಿ ಪ್ರಯಾಣ (ವಿಮಾನದಲ್ಲಿ ಊಟ)
* ಮಧ್ಯಾಹ್ನ 2.55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
* ಮಧ್ಯಾಹ್ನ 3.00ಕ್ಕೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಹೊರಟು 3.55ಕ್ಕೆ ದಾವಣಗೆರೆಗೆ ಆಗಮನ
* ಸಂಜೆ 4.00ಕ್ಕೆ ರಸ್ತೆ ಮೂಲಕವೇ ರೈತ ಸಮಾವೇಶಕ್ಕೆ ಆಗಮನ
* ಸಂಜೆ 5.05ಕ್ಕೆ ಸಮಾವೇಶದ ವೇದಿಕೆಯಿಂದ ನಿರ್ಗಮಿಸಿ, ಹೆಲಿಪ್ಯಾಡ್‍ನತ್ತ
* ಸಂಜೆ 5.15ಕ್ಕೆ ದಾವಣಗೆರೆಯಿಂದ ಹೊರಟು ಸಂಜೆ 6.05ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
* ಸಂಜೆ 6.10ಕ್ಕೆ ಹುಬ್ಬಳ್ಳಿಯಿಂದ ನಿರ್ಗಮಿಸಿ, 8.35ಕ್ಕೆ ದೆಹಲಿ ತಲುಪಲಿರುವ ಪ್ರಧಾನಿ ಮೋದಿ (ವಿಮಾನದಲ್ಲೇ ಊಟ)